ಜನವರಿ 04 ರಂದು ರಾಜ್ಯದ ವಿವಿಧ ಜಿಲ್ಲೆಗಳ ಹವಾಮಾನ ಹೇಗಿದೆ?
ಬೆಂಗಳೂರು, ಜನವರಿ 04: ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಜನವರಿ 9ರಂದು ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೊನ್ನಾವರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಎಚ್‌ಎಎಲ್‌ನಲ್ಲಿ 26.08 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ತಮಿಳುನಾಡು, ಆಂಧ್ರಪ್ರದೇಶ ಹಾಗೂ ಅಸ್ಸಾಂ, ಮೇಘಾಲಯದಲ್ಲಿ ಮಳೆ ಹೆಚ್ಚಾಗಿದೆ. ತಮಿಳುನಾಡಿನಲ್ಲಿ ಸುರಿದ ಮಳೆಗೆ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪೇಟೆಯಲ್ಲಿ ಮಳೆಯಾಗಲಿದೆ.
ಭಾರತೀಯ ಹವಾಮಾನ ಇಲಾಖೆ ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಆಂಧ್ರಪ್ರದೇಶದ ದಕ್ಷಿಣ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ಕಾರೈಕಾಲ್ ಮತ್ತು ಪುದುಚೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ ಸದ್ಯಕ್ಕೆ ಕೊಂಚ ಬಿಡುವು ಕೊಟ್ಟಿದೆ. ಸದ್ಯ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಜನರನ್ನು ನಡುಗಿಸುತ್ತಿದೆ. ಮುಂಗಾರು ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್ ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.

ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಮಳೆ ಮತ್ತು ಹಿಮಪಾತವಾಗಲಿದೆ. ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.
ದೆಹಲಿ, ಪಂಜಾಬ್, ರಾಜಸ್ಥಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಇಂದು ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಆದರೆ, ರಾಜಸ್ಥಾನದಲ್ಲಿ ಇಂದು ತೀವ್ರ ಚಳಿ ಉಂಟಾಗಲಿದೆ.
ಕರ್ನಾಟಕದ ಕರಾವಳಿ, ಬೆಂಗಳೂರು, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಚಳಿಯೂ ಹೆಚ್ಚಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ಚೆನ್ನೈನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಶೀತಗಾಳಿಯ ಜೊತೆಗೆ ಹಗುರ ಮಳೆಯೂ ಸುರಿಯುವ ಸಾಧ್ಯತೆಯಿದೆ.
ಪಂಜಾಬ್, ಹರಿಯಾಣ ಮತ್ತು ಚಂಡೀಗಢದ ಕೆಲವು ಭಾಗಗಳಲ್ಲಿ ಇಂದು ಹಗುರ ಮಳೆಯಾಗುವ ನಿರೀಕ್ಷೆಯಿದೆ. ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಚಳಿಗಾಲ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ. ಮಹಾರಾಷ್ಟ್ರದ ಜಿಲ್ಲೆಗಳಾದ್ಯಂತ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿದೆ. ಇಂದು ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಶೀತ ಗಾಳಿ ಉಂಟಾಗಲಿದೆ.












Click it and Unblock the Notifications