Infographics:ಜ.05ರಂದು ರಾಜ್ಯದ ವಿವಿಧ ಜಿಲ್ಲೆಗಳ ವಾತಾವರಣ ಹೇಗಿದೆ?

ಬೆಂಗಳೂರು, ಜನವರಿ 05: ರಾಜ್ಯದಲ್ಲಿ ಅಕಾಲಿಕ ಮಳೆ ಕಡಿಮೆಯಾಗಿದೆ. ಚಳಿ ಜನರನ್ನು ಮನೆಯಲ್ಲಿ ಕುಳಿತುಕೊಳ್ಳುವಂತೆ ಮಾಡಿದೆ. ಬೆಳಗಿನ ಜಾವ ಮತ್ತು ಸಂಜೆಯಾಗುತ್ತಲೇ ಶೀತದ ಸುಳಿಗಾಳಿ ಜನರು ಹೊರಗಡೆ ಹೋಗದಂತೆ ಮಾಡುತ್ತಿದೆ. ಮತ್ತೊಂದಡೆ ಕೊರೊನಾ, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಸಣ್ಣ ನೆಗಡಿಗೂ ಜನರು ಹೆದರುವಂತಾಗಿದೆ.

ದಕ್ಷಿಣ ಒಳನಾಡಿನಲ್ಲಿ ಬೆಳಗ್ಗೆ ಚಳಿ ಮತ್ತು ಮಧ್ಯಾಹ್ನದ ವೇಳೆ ಶುಷ್ಕ ಹಮಾಮಾನ ಇರಲಿದೆ. ಇತ್ತ ಕರಾವಳಿ ಭಾಗದಲ್ಲಿ ಒಣ ಹವೆ ಇರಲಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಶೀತಗಾಳಿ ಜೊತೆ ದಟ್ಟವಾದ ಮಂಜು ಆವರಿಸಲಿದೆ.

ಬೆಂಗಳೂರು 28-14, ಮೈಸೂರು 29-16, ಚಾಮರಾಜನಗರ 29-16, ರಾಮನಗರ 29-16, ಮಂಡ್ಯ 29-16, ಬೆಂಗಳೂರು ಗ್ರಾಮಾಂತರ 28-14, ಚಿಕ್ಕಬಳ್ಳಾಪುರ 26-12, ಕೋಲಾರ 27-14, ಹಾಸನ 29-14, ಚಿಕ್ಕಮಗಳೂರು 29-14, ದಾವಣಗೆರೆ 31-16, ಶಿವಮೊಗ್ಗ 32-16, ಕೊಡಗು 29-15, ತುಮಕೂರು 28-14, ಉಡುಪಿ 32-22, ಮಂಗಳೂರು 32-24, ಉತ್ತರ ಕನ್ನಡ 32-21, ಧಾರವಾಡ 30-15, ಹಾವೇರಿ 31-15, ಹುಬ್ಬಳ್ಳಿ 31-16, ಬೆಳಗಾವಿ 29-15, ಗದಗ 30-16, ಕೊಪ್ಪಳ 29-16, ವಿಜಯಪುರ 30-17, ಬಾಗಲಕೋಟ 31-16, ಕಲಬುರಗಿ 30-16, ಬೀದರ್ 28-16, ಯಾದಗಿರಿ 30-17, ರಾಯಚೂರ 30-16, ಬಳ್ಳಾರಿ 30-16.

Weather And Rain Forecast: Dry weather Across State As On January 05 2022

ಕರ್ನಾಟಕದಲ್ಲಿ ಮೇ ತಿಂಗಳಿಂದ ನವೆಂಬರ್ ಅಂತ್ಯದವರೆಗೂ ಮಳೆ ಇತ್ತು. ಬಳಿಕ ಡಿಸೆಂಬರ್ ತಿಂಗಳಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿ ವಿಪರೀತ ಚಳಿ ಶುರುವಾಗಿತ್ತು. ಡಿಸೆಂಬರ್ ಕೊನೆಯ ವಾರದಲ್ಲಿ ರಾಜ್ಯಾದ್ಯಂತ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿತ್ತು. ಈಗ 2 ದಿನಗಳಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ.

ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮತ್ತೆ ಚಳಿ ಶುರುವಾಗಿದೆ. ಆದರೆ, ಇಂದಿನಿಂದ ರಾಜ್ಯಾದ್ಯಂತ ಚಳಿಯೂ ಕೊಂಚ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗಡಿ ನಾಡು ಬೀದರ್ ನಲ್ಲಿ ಕಳೆದೊಂದು ವಾರಗಳಿಂದ ಉಷ್ಣಾಂಶ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು ಮೈಕೊರೆಯುವ ಚಳಿಗೆ ಜನರು ಗಡಗಡ ನಡುಗುತ್ತಿದ್ದಾರೆ. ಬೀದರ್ ಜಿಲ್ಲೆಯಲ್ಲಿ ತಣ್ಣನೆಯ ವಾತಾವರಣ ಇರೋದರಿಂದ ಜನ್ರು ಹಾಸಿಗೆಯಿಂದ ಮೇಲೇಳಲು ಕಷ್ಟ ಪಡುತ್ತಿದ್ದಾರೆ. ಬೆಳಿಗ್ಗೆ ಹತ್ತು ಹನ್ನೊಂದು ಗಂಟೆಯಾದರೂ ಜನ್ರನ್ನು ವಿಪರೀತ ಚಳಿ ಕಾಡುತ್ತಿದ್ದು ಗಡಿ ಜಿಲ್ಲೆ ಬೀದರ್ ನಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ.

Weather And Rain Forecast: Dry weather Across State As On January 05 2022

ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಇಂದು ಚಳಿಗಾಲ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ. ಮಹಾರಾಷ್ಟ್ರದ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿತ್ತು. ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಹಿಮಪಾತವಾಗಲಿದೆ.

ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ದೆಹಲಿ, ಪಂಜಾಬ್, ರಾಜಸ್ಥಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಇಂದು ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಆದರೆ, ರಾಜಸ್ಥಾನದಲ್ಲಿ ಇಂದು ತೀವ್ರ ಚಳಿ ಉಂಟಾಗಲಿದೆ.

Weather And Rain Forecast: Dry weather Across State As On January 05 2022

ಶ್ರೀಲಂಕಾದ ಕರಾವಳಿ, ನೈಋತ್ಯದ ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿದ್ದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕಳೆದ ವಾರವಿಡೀ ಮಳೆಯಾಗಿತ್ತು.

ನೆರೆಯ ರಾಜ್ಯವಾದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಅಸ್ಸಾಂ, ಮೇಘಾಲಯದಲ್ಲಿಯೂ ಮಳೆ ಹೆಚ್ಚಾಗಿತ್ತು. ತಮಿಳುನಾಡಿನಲ್ಲಿ 2 ದಿನಗಳ ಹಿಂದೆ ಸುರಿದ ಮಳೆಗೆ ನಾಲ್ವರು ಸಾವನ್ನಪ್ಪಿದ್ದಾರೆ.

Recommended Video

      ಸೂರ್ಯ ಗ್ರಹಣಕ್ಕೆ ರಾಹು-ಕೇತು ಕಾರಣವಾಗಿದ್ದು ಹೇಗೆ? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+