Infographics: ಜನವರಿ 06ರಂದು ರಾಜ್ಯದ ವಿವಿಧ ಜಿಲ್ಲೆಗಳ ಹವಾಮಾನ ಹೇಗಿದೆ?
ಬೆಂಗಳೂರು, ಜನವರಿ 06: ರಾಜ್ಯದ ಮೂರು ಜಿಲ್ಲೆಗಳಲ್ಲಿ ಜನವರಿ 11ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ, ಇನ್ನುಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಬಿಸಿಲಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕೆಐಎಎಲ್‌ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೆಳಗಾವಿ ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗಡಿ ನಾಡು ಬೀದರ್ ನಲ್ಲಿ ಕಳೆದೊಂದು ವಾರಗಳಿಂದ ಉಷ್ಣಾಂಶ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು ಮೈಕೊರೆಯುವ ಚಳಿಗೆ ಜನರು ಗಡಗಡ ನಡುಗುತ್ತಿದ್ದಾರೆ. ಬೀದರ್ ಜಿಲ್ಲೆಯಲ್ಲಿ ತಣ್ಣನೆಯ ವಾತಾವರಣ ಇರೋದರಿಂದ ಜನ್ರು ಹಾಸಿಗೆಯಿಂದ ಮೇಲೇಳಲು ಕಷ್ಟ ಪಡುತ್ತಿದ್ದಾರೆ. ಬೆಳಿಗ್ಗೆ ಹತ್ತು ಹನ್ನೊಂದು ಗಂಟೆಯಾದರೂ ಜನ್ರನ್ನು ವಿಪರೀತ ಚಳಿ ಕಾಡುತ್ತಿದ್ದು ಗಡಿ ಜಿಲ್ಲೆ ಬೀದರ್ ನಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ.

ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಇಂದು ಚಳಿಗಾಲ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ. ಮಹಾರಾಷ್ಟ್ರದ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿತ್ತು. ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಹಿಮಪಾತವಾಗಲಿದೆ.
ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ದೆಹಲಿ, ಪಂಜಾಬ್, ರಾಜಸ್ಥಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಇಂದು ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಆದರೆ, ರಾಜಸ್ಥಾನದಲ್ಲಿ ಇಂದು ತೀವ್ರ ಚಳಿ ಉಂಟಾಗಲಿದೆ.

ಕರ್ನಾಟಕದಲ್ಲಿ ಮೇ ತಿಂಗಳಿಂದ ನವೆಂಬರ್ ಅಂತ್ಯದವರೆಗೂ ಮಳೆ ಇತ್ತು. ಬಳಿಕ ಡಿಸೆಂಬರ್ ತಿಂಗಳಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿ ವಿಪರೀತ ಚಳಿ ಶುರುವಾಗಿತ್ತು. ಡಿಸೆಂಬರ್ ಕೊನೆಯ ವಾರದಲ್ಲಿ ರಾಜ್ಯಾದ್ಯಂತ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿತ್ತು.
ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ. ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮತ್ತೆ ಚಳಿ ಶುರುವಾಗಿದೆ. ಆದರೆ, ಇಂದಿನಿಂದ ರಾಜ್ಯಾದ್ಯಂತ ಚಳಿಯೂ ಕೊಂಚ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶ್ರೀಲಂಕಾದ ಕರಾವಳಿ, ನೈಋತ್ಯದ ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿದ್ದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕಳೆದ ವಾರವಿಡೀ ಮಳೆಯಾಗಿತ್ತು.
ನೆರೆಯ ರಾಜ್ಯವಾದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಅಸ್ಸಾಂ, ಮೇಘಾಲಯದಲ್ಲಿಯೂ ಮಳೆ ಹೆಚ್ಚಾಗಿತ್ತು. ತಮಿಳುನಾಡಿನಲ್ಲಿ 2 ದಿನಗಳ ಹಿಂದೆ ಸುರಿದ ಮಳೆಗೆ ನಾಲ್ವರು ಸಾವನ್ನಪ್ಪಿದ್ದಾರೆ.
-
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಲು ಟಾಪ್ 5 ಕಾರಣಗಳು: ಆರೋಗ್ಯಕ್ಕೆ ಅದ್ಭುತ ಲಾಭಗಳು -
7 Summer Kitchen Tips: ಬೇಸಿಗೆಯಲ್ಲಿ ಅಡುಗೆಮನೆ ತಂಪಾಗಿಡಲು 7 ಸುಲಭ ಸಲಹೆಗಳು -
Summer Heat Alert: ಮಕ್ಕಳ ಆರೋಗ್ಯ ಕಾಪಾಡಲು ಪೋಷಕರಿಗೆ 7 ಮುಖ್ಯ ಸಲಹೆಗಳು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications