Infographics: ಜನವರಿ 07 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹವಾಮಾನ ಹೇಗಿದೆ?

ಬೆಂಗಳೂರು, ಜನವರಿ 07: ಕರ್ನಾಟಕದಲ್ಲಿ ಚಳಿ ಕೊಂಚ ಕಡಿಮೆಯಾಗಿದೆ, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸ್ವಲ್ಪ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.

ಡಿಸೆಂಬರ್ ತಿಂಗಳಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿ ವಿಪರೀತ ಚಳಿ ಶುರುವಾಗಿತ್ತು. ಡಿಸೆಂಬರ್ ಕೊನೆಯ ವಾರದಲ್ಲಿ ರಾಜ್ಯಾದ್ಯಂತ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿತ್ತು.

ಕಳೆದ ವಾರದಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ. ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಿದ್ದ ಚಳಿಯೂ ಇದೀಗ ತಗ್ಗುತ್ತಿದೆ. ಆದರೆ, ದೆಹಲಿ, ನೊಯ್ಡಾ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿದೆ.

Weather And Rain Forecast: Dry weather Across State As On January 07 2022

ಹೊನ್ನಾವರದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳೂರು ಏರ್‌ಪೋರ್ಟ್‌ನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಸ್ ಲ್ಪ ಮೋಡಕವಿದ ವಾತಾವರಣವಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry weather Across State As On January 07 2022

ಎಚ್‌ಎಎಲ್‌ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಇಂದಿನಿಂದ 3 ದಿನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಈ ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದಿನಿಂದ ಜನವರಿ 9ರವರೆಗೆ ಮಳೆಯಾಗುತ್ತದೆ.

ಜನವರಿ 7ರಂದು ನೈಋತ್ಯ ರಾಜಸ್ಥಾನದಲ್ಲಿ ಚಂಡಮಾರುತ ರೂಪುಗೊಳ್ಳುವ ನಿರೀಕ್ಷೆಯಿದೆ. ಜನವರಿ 7ರಿಂದ 9ರವರೆಗೆ ವಾಯುವ್ಯ ಭಾರತದಲ್ಲಿ ಚಳಿ ಹೆಚ್ಚಾಗಲಿದೆ. ಶುಕ್ರವಾರದಿಂದ ಭಾನುವಾರದವರೆಗೆ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮದ ಸಾಧ್ಯತೆಯಿದೆ. ಮುಂದಿನ ವಾರ ಮಳೆಯ ತೀವ್ರತೆಯು ಕಡಿಮೆಯಾಗಬಹುದು. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಈ ವಾರಾಂತ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Weather And Rain Forecast: Dry weather Across State As On January 07 2022

ಜನವರಿ 7ರಂದು ಪಂಜಾಬ್, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಆಲಿಕಲ್ಲು ಮಳೆ ಬೀಳಲಿದೆ ಎಂದು IMD ಮುನ್ಸೂಚನೆ ನೀಡಿದೆ. ಶುಕ್ರವಾರ ಮಧ್ಯಾಹ್ನದಿಂದ ದೆಹಲಿ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಬಯಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಜನವರಿ 7ಕ್ಕೆ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಜನವರಿ 8ರ ಅವಧಿಯಲ್ಲಿ ಹೆಚ್ಚಿನ ಗಾಳಿ ಮತ್ತು ಮಳೆಯ ಸಾಧ್ಯತೆಯಿದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಇಂದು ಭಾರೀ ಮಳೆ ಅಥವಾ ಹಿಮಪಾತ ಸಂಭವಿಸುತ್ತದೆ. ಇಂದಿನಿಂದ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪಶ್ಚಿಮ ಮಧ್ಯಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆಯಿದೆ.

ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಇಂದು ಚಳಿ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ.

ಮಹಾರಾಷ್ಟ್ರದ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿತ್ತು. ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಹಿಮಪಾತವಾಗಲಿದೆ.

Recommended Video

      Team India ಆಟಗಾರರ ಕಳಪೆ ಆಟದಿಂದ ಬೇಸತ್ತ Dravid | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+