Infographics: ಜ.10ರಂದು ರಾಜ್ಯದ ವಿವಿಧ ಜಿಲ್ಲೆಗಳ ವಾತಾವರಣ ಹೇಗಿದೆ?

ಬೆಂಗಳೂರು, ಜನವರಿ 10:ರಾಜ್ಯದ 6ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಕಲಬುರಗಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಬೆಳಗಿನ ಸಮಯದಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಬಳಿಕ ಬಿಸಿಲು ಬರಲಿದೆ, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry weather Across State As On January 10 2022

ಹೊನ್ನಾವರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರತದ ಕೆಲವು ರಾಜ್ಯಗಳಲ್ಲಿ ಜನವರಿ 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Weather And Rain Forecast: Dry weather Across State As On January 10 2022

ಮಳೆಯ ಜೊತೆಗೆ ದಟ್ಟವಾದ ಮಂಜು ಕೂಡ ಜನರಿಗೆ ಸಂಕಷ್ಟವನ್ನು ಹೆಚ್ಚಿಸಲಿದೆ ಅಂತಾ ಎಚ್ಚರಿಕೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಉತ್ತರ ಮತ್ತು ಮಧ್ಯ ಭಾರತದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಪಂಜಾಬ್, ಹರ್ಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಮಳೆಯಾಗಲಿದೆ. ಆದರೆ ಇದಾದ ಬಳಿಕ ಮಳೆಯ ಪ್ರಭಾವ ಕಡಿಮೆಯಾಗಲಿದೆ.

ಮತ್ತೊಂದೆಡೆ ಜನವರಿ 11ರವರೆಗೆ ಮಧ್ಯಪ್ರದೇಶ, ವಿದರ್ಭಾ, ಪೂರ್ವ ಭಾರತ ಮತ್ತು ಛತ್ತೀಸ್‌ಗಢದಲ್ಲಿ ಮಳೆ ಮುಂದುವರಿಯುತ್ತದೆ ಎಂದು ಹೇಳಲಾಗಿದೆ.

ಮಳೆಯ ಜೊತೆಗೆ ದಟ್ಟವಾದ ಮಂಜು ಕೂಡ ಜನರು ಎದುರಿಸಬೇಕಾಗುತ್ತದೆ ಎಂಬುದು ಗಮನಿಸಬೇಕಾದ ಸಂಗತಿ. ಉತ್ತರ ಪ್ರದೇಶ, ಬಿಹಾರ, ವಾಯುವ್ಯ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ 24 ಗಂಟೆಗಳ ಕಾಲ ದಟ್ಟ ಮಂಜು ಇರಲಿದೆ.

Weather And Rain Forecast: Dry weather Across State As On January 10 2022

ಈ ಬಾರಿ ಜನವರಿಯಲ್ಲಿ ದೆಹಲಿಯಲ್ಲಿ ಸುರಿದ ಮಳೆ 22 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 41 ಮಿ.ಮೀ ಮಳೆಯಾಗಿದೆ. ದೆಹಲಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದೆಹಲಿಯ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. IMD ಪ್ರಕಾರ ಹವಾಮಾನ ಬದಲಾವಣೆ ಮತ್ತು ಹೆಚ್ಚುತ್ತಿರುವ ಸೈಕ್ಲೋನ್‌ಗಳಿಂದ ಮಳೆಯಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+