Infographics:ರಾಜ್ಯದ ಕೆಲವೆಡೆ ಮಳೆ, ಕರಾವಳಿಯಲ್ಲಿ ಒಣಹವೆ
ಬೆಂಗಳೂರು, ಏಪ್ರಿಲ್ 25: ರಾಜ್ಯದ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕೊಟ್ಟೂರು (ಬಳ್ಳಾರಿ ಜಿಲ್ಲೆ), ಚಾಮರಾಜನಗರದ ಕೆಲವೆಡೆ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 38.5 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ಇದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಾಗಿಲ್ಲ.
ಇನ್ನು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಿಂಚಿನ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ 35 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ಕೂಡಾ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಮುಂಬೈನಲ್ಲಿ 36.2 ಡಿಗ್ರಿ ಸೆಲ್ಸಿಯಸ್, ಚೆನ್ನೈನಲ್ಲಿ 32.8 ಡಿಗ್ರಿ ಸೆಲ್ಸಿಯಸ್, ಹೈದಾರಾಬಾದ್‌ನಲ್ಲಿ 37.8ಡಿಗ್ರಿ ಸೆಲ್ಸಿಯಸ್, ಕೋಲ್ಕತ್ತಾದಲ್ಲಿ 34.8 ಡಿಗ್ರಿ ಸೆಲ್ಸಿಯಸ್, ಅಹಮದಾಬಾದ್‌ನಲ್ಲಿ 41.4 ಡಿಗ್ರಿ ಸೆಲ್ಸಿಯಸ್, ಪುಣೆಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಹಾಗೂ ದೆಹಲಿಯಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

ದೇಶದ ಹಲವಾರು ರಾಜ್ಯಗಳಲ್ಲಿ ತಾಪಮಾನ ಏರಿಕೆ ಆಗುತ್ತಿದೆ. ಈ ನಡುವೆ ಸೋಮವಾರ ಐಎಂಡಿ ಭಾರತದ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಕೇರಳ, ಕರ್ನಾಟಕ, ತಮಿಳುನಾಡು, ತೆಲಂಗಾಣ ಹಾಗೂ ಛತ್ತೀಸ್‌ಗಢದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಹಾಗೆಯೇ ಆಂಧ್ರ ಪ್ರದೇಶದಲ್ಲಿ ಏಪ್ರಿಲ್ 27, 28ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಎಲ್ಲಾ ಪ್ರದೇಶಲ್ಲಿ ತಾಪಮಾನ ಹಾಗೆಯೇ ಇರಲಿದೆ.












Click it and Unblock the Notifications