ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಫೆ.14ರಂದು ರಾಜ್ಯದ ಹವಾಮಾನ ಹೇಗಿದೆ?

|
Google Oneindia Kannada News

ಬೆಂಗಳೂರು, ಫೆಬ್ರವರಿ 14: ರಾಜ್ಯಾದ್ಯಂತ ಚಳಿ ಕಡಿಮೆಯಾಗಿದ್ದು, ಒಣಹವೆ ಮುಂದುವರೆದಿದೆ. ಬೀದರ್‌ನಲ್ಲಿ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On February 14 2022

ಮುಂದಿನ ಎರಡು ದಿನಗಳಲ್ಲಿ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ 4 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ಮುಂದಿನ 2 ದಿನಗಳಲ್ಲಿ ಮಿಂಚು- ಗುಡುಗು ಸಹಿತ ಮಳೆಯಾಗಬಹುದು.

Weather And Rain Forecast: Dry Weather Prevailed Over Karnataka On February 14 2022

ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಜನವರಿ 15 ಮತ್ತು 16ರಂದು ಚದುರಿದ ಮಳೆ ಅಥವಾ ಹಿಮಪಾತ ಉಂಟಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮಪಾತವಾಗಲಿದೆ. ಫೆಬ್ರವರಿ 17ರಿಂದ 21ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ.

ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

Weather And Rain Forecast: Dry Weather Prevailed Over Karnataka On February 14 2022

ಇನ್ನೆರಡು ದಿನ ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳ ಕಾಲ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಬಲವಾದ ಗಾಳಿ ಕಂಡುಬರುತ್ತದೆ.

ಮುಂದಿನ ಎರಡು ದಿನಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಮಳೆಯಾಗಲಿದೆ. ಫೆಬ್ರವರಿ 13 ಮತ್ತು 15ರ ನಡುವೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

Karnataka hijab ban: America ನೀಡಿದ Hijab ಹೇಳಿಕೆಗೆ ತಿರುಗೇಟು ಕೊಟ್ಟ ಭಾರತ | Oneindia Kannada

English summary
Weather and rain forecast as on February 14 2022: Dry Weather Prevailed Over Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X