Infographics: ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು, ಫೆಬ್ರವರಿ 16: ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ, ಬೆಳಗಾವಿಯಲ್ಲಿ 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On February 16 2022

ಎಚ್‌ಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 22.2ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On February 16 2022

ಇನ್ನೆರಡು ದಿನ ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳ ಕಾಲ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಬಲವಾದ ಗಾಳಿ ಕಂಡುಬರುತ್ತದೆ.

ಮುಂದಿನ ಎರಡು ದಿನಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಮಳೆಯಾಗಲಿದೆ. ಫೆಬ್ರವರಿ 13 ಮತ್ತು 15ರ ನಡುವೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

Weather And Rain Forecast: Dry Weather Prevailed Over Karnataka On February 16 2022

ಮುಂದಿನ ಎರಡು ದಿನಗಳಲ್ಲಿ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ) ತಿಳಿಸಿದೆ.

ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ 4 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ಮುಂದಿನ 2 ದಿನಗಳಲ್ಲಿ ಮಿಂಚು- ಗುಡುಗು ಸಹಿತ ಮಳೆಯಾಗಬಹುದು.

ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಜನವರಿ 15 ಮತ್ತು 16ರಂದು ಚದುರಿದ ಮಳೆ ಅಥವಾ ಹಿಮಪಾತ ಉಂಟಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮಪಾತವಾಗಲಿದೆ. ಫೆಬ್ರವರಿ 17ರಿಂದ 21ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ.

Recommended Video

      ಮಿಸ್ಟೇಕ್ ಮಾಡಿದ್ರೂ ಲೆಗ್ ಬ್ರೇಕ್ ಬೌಲಿಂಗ್ ಮಾಡಿ ವಿಂಡೀಸ್ ಗೆ ಬ್ರೇಕ್ ಹಾಕಿದ ಬಿಷ್ಣೋಯ್ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+