Inforgraphics: ಫೆಬ್ರವರಿ 18ರಂದು ರಾಜ್ಯದ ವಾತಾವರಣ ಹೇಗಿದೆ?

ಬೆಂಗಳೂರು, ಫೆಬ್ರವರಿ 18: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಸ್ವಲ್ಪ ಚಳಿ ಇದ್ದು, ಉಳಿದೆಡೆ ಒಣಹವೆ ಮುಂದುವರೆದಿದೆ.
ದಾವಣಗೆರೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 114.6ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 23.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 34.4ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On February 18 2022

ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ 4 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ಮುಂದಿನ 2 ದಿನಗಳಲ್ಲಿ ಮಿಂಚು- ಗುಡುಗು ಸಹಿತ ಮಳೆಯಾಗಬಹುದು.

ಇನ್ನೆರಡು ದಿನ ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳ ಕಾಲ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಬಲವಾದ ಗಾಳಿ ಕಂಡುಬರುತ್ತದೆ.

Weather And Rain Forecast: Dry Weather Prevailed Over Karnataka On February 18 2022

ಮುಂದಿನ ಎರಡು ದಿನಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಮಳೆಯಾಗಲಿದೆ. ಫೆಬ್ರವರಿ 18 ಮತ್ತು 19ರ ನಡುವೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Weather And Rain Forecast: Dry Weather Prevailed Over Karnataka On February 18 2022

ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮಪಾತವಾಗಲಿದೆ. ಫೆಬ್ರವರಿ 17ರಿಂದ 21ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ.

ಮುಂದಿನ ಎರಡು ದಿನಗಳಲ್ಲಿ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

Weather And Rain Forecast: Dry Weather Prevailed Over Karnataka On February 18 2022

ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಫೆಬ್ರವರಿ 19 ಮತ್ತು 20ರಂದು ಚದುರಿದ ಮಳೆ ಅಥವಾ ಹಿಮಪಾತ ಉಂಟಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+