Inforgraphics: ಫೆಬ್ರವರಿ 19ರಂದು ರಾಜ್ಯದ ವಾತಾವರಣ ಹೇಗಿದೆ?

ಬೆಂಗಳೂರು, ಫೆಬ್ರವರಿ 19: ರಾಜ್ಯಾದ್ಯಂತ ಸ್ವಲ್ಪ ಚಳಿ ಇದ್ದು, ಒಣಹವೆ ಮುಂದುವರೆದಿದೆ.

ದಾವಣಗೆರೆಯಲ್ಲಿ 14.08 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On February 19 2022

ಹೊನ್ನಾವರದಲ್ಲಿ 31.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 22.6ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ 4 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ಮುಂದಿನ 2 ದಿನಗಳಲ್ಲಿ ಮಿಂಚು- ಗುಡುಗು ಸಹಿತ ಮಳೆಯಾಗಬಹುದು.

Weather And Rain Forecast: Dry Weather Prevailed Over Karnataka On February 19 2022

ಮುಂದಿನ ಎರಡು ದಿನಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಮಳೆಯಾಗಲಿದೆ. ಫೆಬ್ರವರಿ 18 ಮತ್ತು 19ರ ನಡುವೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯ ನಿರೀಕ್ಷೆಗಳಿವೆ. ಕೇರಳ, ಲಕ್ಷದ್ವೀಪ ಮತ್ತು ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಈಶಾನ್ಯ ಮಾರುತಗಳ ಚಲನೆ ತಗ್ಗಿದ ಹಿನ್ನೆಲೆ ಕೇರಳ ಶೇ. 33ರಷ್ಟು ಮಳೆಯ ಕೊರತೆಯನ್ನು ಎದುರಿಸುತ್ತಿದೆ. ಆದ್ರೆ ತಮಿಳುನಾಡಿನ ದಕ್ಷಿಣ ಭಾಗದ ಜಿಲ್ಲೆ ಮತ್ತು ಕರಾವಳಿಯಲ್ಲಿ ಮಳೆಯಾಗುತ್ತಿದೆ. ಈ ಬಾರಿ ಅಕಾಲಿಕ ಮಳೆಯಿಂದಾಗಿ ತಮಿಳುನಾಡಿನಲ್ಲಿ ಸಾವು-ನೋವುಗಳು ಸಂಭವಿಸಿವೆ.

Weather And Rain Forecast: Dry Weather Prevailed Over Karnataka On February 19 2022

ಇನ್ನೆರಡು ದಿನ ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳ ಕಾಲ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಬಲವಾದ ಗಾಳಿ ಕಂಡುಬರುತ್ತದೆ.

ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಫೆಬ್ರವರಿ 19 ಮತ್ತು 20ರಂದು ಚದುರಿದ ಮಳೆ ಅಥವಾ ಹಿಮಪಾತ ಉಂಟಾಗಲಿದೆ.

ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮಪಾತವಾಗಲಿದೆ. ಫೆಬ್ರವರಿ 17ರಿಂದ 21ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ.

ಮುಂದಿನ ಎರಡು ದಿನಗಳಲ್ಲಿ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Recommended Video

      ಆಧುನಿಕ ಕೃಷಿ ಪದ್ಧತಿಯ ಹೊಸ ಅಧ್ಯಾಯ,100 ಕಿಸಾನ್ ಡ್ರೋನ್ ಗಳಿಗೆ ಚಾಲನೆ ನೀಡಿದ PM Modi | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+