Inforgraphics: ರಾಜ್ಯದೆಲ್ಲೆಡೆ ವಾತಾವರಣ- ಒಣಹವೆ, ಚಳಿ, ಬಿಸಿಲು
ಬೆಂಗಳೂರು, ಫೆಬ್ರವರಿ 23: ರಾಜ್ಯಾದ್ಯಂತ ಸ್ವಲ್ಪ ಚಳಿ ಇದ್ದು, ಒಣಹವೆ ಮುಂದುವರೆದಿದೆ. ರಾಜ್ಯದಲ್ಲಿ ಕನಿಷ್ಠ ಉಷ್ಣಾಂಶವು ಹುಬ್ಬಳ್ಳಿಯಲ್ಲಿ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ. ತಮಿಳುನಾಡು, ಕೇರಳ, ರಾಯಲಸೀಮಾ ಮತ್ತು ದಕ್ಷಿಣ ಒಳನಾಡಿನ ರಾಜ್ಯಗಳು ಕಾಲೋಚಿತ ಗುಡುಗು ಸಹಿತ ಮಳೆಯ ಆರಂಭದ ಲಕ್ಷಣಗಳು ಸದ್ಯಕ್ಕೆ ಮೂಡುತ್ತಿಲ್ಲ. ಪಾದರಸದ ಮಟ್ಟವು ಹೆಚ್ಚಿನ ಪ್ರಮಾಣದಲ್ಲಿ ಏರುತ್ತಿದೆ, ದಕ್ಷಿಣ ಭಾರತದಲ್ಲಿ ಅನೇಕ ಸ್ಥಳಗಳಲ್ಲಿ ಸರಾಸರಿ 35 ° C ಮೀರಿದೆ.
ಬೆಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹುಬ್ಬಳ್ಳಿಯಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ

ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ 4 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ಮುಂದಿನ 2 ದಿನಗಳಲ್ಲಿ ಮಿಂಚು- ಗುಡುಗು ಸಹಿತ ಮಳೆಯಾಗಬಹುದು.
ಮುಂದಿನ ಎರಡು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಮಳೆಯಾಗಲಿದೆ. ಇಪ್ಪತ್ನಾಲ್ಕು ಗಂಟೆಗಳಲ್ಲಿ ಜಮ್ಮು-ಕಾಶ್ಮೀರ-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 4 ದಿನಗಳಲ್ಲಿ ಪಂಜಾಬ್, ಉತ್ತರ ಹರಿಯಾಣ ಮತ್ತು ಚಂಡೀಗಢ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಪ್ರತ್ಯೇಕವಾದ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೆಹಲಿ ಮತ್ತು ಪೂರ್ವ ಉತ್ತರ ಪ್ರದೇಶವು ಫೆಬ್ರವರಿ 25 ಮತ್ತು 26 ರಂದು ಪ್ರತ್ಯೇಕವಾದ ಲಘು ಮಳೆಯಾಗುವ ಸಾಧ್ಯತೆಯಿದೆ.
ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಫೆಬ್ರವರಿ 24 ಮತ್ತು 25 ರಂದು ಗುಡುಗು ಮತ್ತು ಮಿಂಚಿನ ಜೊತೆಗೆ ಚದುರಿದ ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯ ನಿರೀಕ್ಷೆ ಕ್ಷೀಣಿಸಿದೆ. ಆದರೆ, ಕೇರಳ, ಲಕ್ಷದ್ವೀಪ ಮತ್ತು ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಈಶಾನ್ಯ ಮಾರುತಗಳ ಚಲನೆ ತಗ್ಗಿದ್ದು, ಕೇರಳ ಶೇ. 33ರಷ್ಟು ಮಳೆಯ ಕೊರತೆಯನ್ನು ಎದುರಿಸುತ್ತಿದೆ.

ಫೆಬ್ರವರಿ 24 ಮತ್ತು 26 ರ ಅವಧಿಯಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾಗಳಲ್ಲಿ ಅಲ್ಲಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನುನೀಡಲಾಗಿದೆ. ಈ ಈಶಾನ್ಯ ಪ್ರದೇಶವು ಫೆಬ್ರವರಿ 25 ರಂದು ಗುಡುಗು ಮತ್ತು ಮಿಂಚಿನ ಚಟುವಟಿಕೆಯನ್ನು ಸ್ವೀಕರಿಸುವ ಸಾಧ್ಯತೆಯಿದೆ.
ಮುಂದಿನ 05 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಸಾಕಷ್ಟು ವ್ಯಾಪಕವಾದ ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 27 ರಂದು ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ದೃಢಪಡಿಸಿದೆ.
ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮಪಾತವಾಗಲಿದೆ. ಫೆಬ್ರವರಿ 17ರಿಂದ 21ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ.












Click it and Unblock the Notifications