Infographics: ಜನವರಿ 19ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹವಾಮಾನ ಹೇಗಿದೆ?

ಬೆಂಗಳೂರು, ಜನವರಿ 19: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದೆ. ಬೆಳಗಾವಿಯಲ್ಲಿ 11.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ಕೆಐಎಎಲ್‌ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳೂರು ಏರ್‌ಪೋರ್ಟ್‌ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On January 19 2022

ಮುಂದಿನ 4 ದಿನಗಳಲ್ಲಿ ದೇಶದ 15 ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಸಂಬಂಧ ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಜನವರಿ 20 ಮತ್ತು 22 ರ ನಡುವೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗುವ ಮನ್ಸೂಚನೆಯನ್ನು ನೀಡಿದೆ.

ಇನ್ನು ಜನವರಿ 21 ಮತ್ತು 23 ರ ನಡುವೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಯುಪಿಯಲ್ಲಿ ಲಘು/ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಈ ರಾಜ್ಯಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ. ಮಲೆನಾಡಿನ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ.

Weather And Rain Forecast: Dry Weather Prevailed Over Karnataka On January 19 2022

ಇಂದಿನಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು, ಹಿಮಾಚಲ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸುತ್ತದೆ.

ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಚಳಿ ಗಾಳಿ ಬೀಸಲಿದೆ. ಹಾಗೇ, ಇಂದು ಉತ್ತರ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಚೆನ್ನೈ, ತಿರುವಳ್ಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ತಿಳಿಸಿದೆ.

Weather And Rain Forecast: Dry Weather Prevailed Over Karnataka On January 19 2022

ಚೆನ್ನೈ, ಚೆಂಗಲ್ಪಟ್ಟು, ರಾಣಿಪೇಟ್, ಕಾಂಚೀಪುರಂ, ವೆಲ್ಲೂರು, ಕಡಲೂರು, ವಿಲ್ಲುಪುರಂ, ತಿರುವರೂರ್, ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಶೀತ ಅಲೆಯ ಪರಿಸ್ಥಿತಿ ಇರಬಹುದೆಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+