Infographics: ಜ.21ರಂದು ರಾಜ್ಯದ ವಿವಿಧ ಜಿಲ್ಲೆಗಳ ಹವಾಮಾನ ಹೇಗಿದೆ?

ಬೆಂಗಳೂರು, ಜನವರಿ 21: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದ್ದು, ಕೆಲವು ಜಿಲ್ಲೆಗಳಲ್ಲಿ ಚಳಿ ಇದೆ. ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು,16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್‌ನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಎಚ್‌ಎಎಲ್‌ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On January 21 2022

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇಂದಿನಿಂದ ಜ. 22ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 2 ದಿನಗಳಲ್ಲಿ ರಾಜಸ್ಥಾನ, ಉತ್ತರ ಪ್ರದೇಶ, ಉತ್ತರ ಮಧ್ಯಪ್ರದೇಶ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಂಜಾಬ್, ಹರಿಯಾಣ, ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾದಲ್ಲಿ ದಟ್ಟವಾದ ಮಂಜಿನಿಂದ ಕೂಡಿದ ವಾತಾವರಣವಿರಲಿದೆ. ಇಂದು ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ವ್ಯಾಪಕವಾದ ಹಿಮ ಅಥವಾ ಮಳೆ ಉಂಟಾಗಲಿದೆ. ಇಂದು ಮತ್ತು ನಾಳೆ ಜಮ್ಮು ಕಾಶ್ಮೀರದ ಪರ್ವತ ಪ್ರದೇಶಗಳಲ್ಲಿ ಮಳೆಯಾಗಲಿದೆ.

Weather And Rain Forecast: Dry Weather Prevailed Over Karnataka On January 21 2022

ಜಮ್ಮು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಹಿಮಪಾತವಾಗಲಿದೆ. ಮುಂದಿನ 3 ದಿನಗಳವರೆಗೆ ಯಾವುದೇ ಗಮನಾರ್ಹ ಮಳೆಯ ಚಟುವಟಿಕೆಯು ಸಾಧ್ಯವಿಲ್ಲ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 2 ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಶೀತ ಗಾಳಿ ಇರಲಿದೆ.

ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಿಜೋರಾಂನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ದೇಶದ ಉಳಿದ ಭಾಗಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಮುನ್ಸೂಚನೆ ನೀಡಲಾಗಿದೆ. ಪಂಜಾಬ್, ಹರಿಯಾಣ, ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾದಲ್ಲಿ ದಟ್ಟವಾದ ಮಂಜಿನಿಂದ ಕೂಡಿದ ವಾತಾವರಣವಿರಲಿದೆ.

Weather And Rain Forecast: Dry Weather Prevailed Over Karnataka On January 21 2022

ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 2 ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಚಳಿ ವಾತಾವರಣ ಇರಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನದಲ್ಲಿ ಶೀತ ವಾತಾವರಣ ಇರಲಿದೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲೂ ಮಳೆ ಹೆಚ್ಚಾಗಲಿದೆ. ಈ ಮಳೆಯು ಜನವರಿ 21ರಂದು ಪ್ರಾರಂಭವಾಗುತ್ತದೆ. ಜನವರಿ 22ರಿಂದ ಮಳೆ ಹೆಚ್ಚಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+