Infographics: ರಾಜ್ಯದ ವಿವಿಧೆಡೆ ಹವಾಮಾನ ಹೇಗಿದೆ?

ಬೆಂಗಳೂರು, ಜನವರಿ 24: ರಾಜ್ಯದಲ್ಲಿ ಒಣಹವೆ ಇದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಚಳಿ ವಾತಾವರಣ ಇದೆ. ಬೆಳಗಾವಿಯಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೆಐಎಎಲ್‌ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On January 24 2022

ಜನವರಿ 24 ಹಾಗೂ 25ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಾಫರಾಬಾದ್, ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ ಲಘು ಹಾಗೂ ಚದುರಿದ ಮಳೆ ಮತ್ತು ಹಿಮಪಾತವಾಗುವ ಮುನ್ಸೂಚನೆ ನೀಡಲಾಗಿದೆ.

ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಜನವರಿ 24ರಂದು ಬಿಹಾರ, ಜಾರ್ಖಂಡ್, ಉತ್ತರ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತ ಮತ್ತು ಮಧ್ಯ ಭಾರತದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿಯಲಿದೆ ಎಂದು ಹೇಳಲಾಗಿದೆ.

Weather And Rain Forecast: Dry Weather Prevailed Over Karnataka On January 24 2022

ಮುಂದಿನ ಮೂರು ದಿನ ಗುಜರಾತ್, ಮಹಾರಾಷ್ಟ್ರದಲ್ಲಿ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿಯುತ್ತದೆ ಎನ್ನಲಾಗಿದೆ. ಜನವರಿ 24,25ರಂದು ಈಶಾನ್ಯ ಭಾರತದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಮುಂದಿನ 48 ಗಂಟೆಗಳಲ್ಲಿ ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಆಲಿಕಲ್ಲು ಮಳೆಯಾಗಬಹುದು ಎಂದು ಹೇಳಲಾಗಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಆರೆಂಜ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಭಾನುವಾರ ಅಂದರೆ ಜನವರಿ 23 ರಂದು ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಅದರಂತೆ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಸ್ಥಾನದಲ್ಲಿ ಯಾವುದೇ ರೀತಿಯ ಕಟ್ಟುಪಾಡುಗಳು ಸದ್ಯಕ್ಕೆ ಇಲ್ಲ.

Weather And Rain Forecast: Dry Weather Prevailed Over Karnataka On January 24 2022

ಇನ್ನೆರಡು ದಿನ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಕೂಡ ಮಳೆಯಾಗಲಿದೆ. ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸುತ್ತದೆ. ಇಂದು ಹಿಮಾಚಲ ಪ್ರದೇಶದ ಮೇಲೆ ಭಾರೀ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ. ಅಲ್ಲದೆ, ಇಂದು ಮತ್ತು ನಾಳೆ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಉತ್ತರ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಮಳೆಯಾಗಲಿದೆ.

ಇಂದು ಮತ್ತು ನಾಳೆ ವ್ಯಾಪಕ ಮಳೆ, ಹಿಮಪಾತವಾಗಲಿದೆ ಮತ್ತು ನಂತರದಲ್ಲಿ ಇಳಿಕೆಯಾಗಲಿದೆ. ಅದರಂತೆ ಉಪ-ವಿಭಾಗಗಳ ಮೇಲೆ ಭಾರೀ ಮಳೆ, ಹಿಮ ಬೀಳುವ ಸಾಧ್ಯತೆಯಿದೆ. ಪೂರ್ವ ಉತ್ತರ ಪ್ರದೇಶ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ಇನ್ನೂ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರದಲ್ಲಿ ಕೂಡ ಇಂದು ಮತ್ತು ನಾಳೆ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+