ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ರಾಜ್ಯದ ಹಲವೆಡೆ ಮೋಡಕವಿದ ವಾತಾವರಣ

|
Google Oneindia Kannada News

ಬೆಂಗಳೂರು, ಜನವರಿ 29: ರಾಜ್ಯದ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬೀದರ್‌ನಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On January 29 2022

ಇಂದು ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಶೀತ ಗಾಳಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಇಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಮುಂದಿನ 4 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘು ಮಳೆಯಾಗುತ್ತದೆ. ಈಶಾನ್ಯ ಭಾರತದಲ್ಲಿ ಇಂದು ಚದುರಿದ ಮಧ್ಯಮ ಮಳೆಯಾಗಲಿದೆ. ನಂತರ ಒಣ ಹವಾಮಾನ ಇರುತ್ತದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ 2 ದಿನಗಳ ಕಾಲ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮೆ, ಕೇರಳ, ಮಾಹೆಯಲ್ಲಿ ಮಳೆಯಾಗಲಿದೆ. ಮುಂದಿನ 4 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್​ನಲ್ಲಿ ಮಳೆಯಾಗಲಿದೆ. ಜನವರಿ 29ರಿಂದ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ ರಾಜ್ಯದಲ್ಲಿ ಇಂದು ಮಳೆಯಾಗಲಿದ್ದು, ಜನವರಿ 30ರಿಂದ ಮಳೆ ಕಡಿಮೆಯಾಗುತ್ತದೆ.

Weather And Rain Forecast: Dry Weather Prevailed Over Karnataka On January 29 2022

ಇಂದು ವಿದರ್ಭ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ಗುಜರಾತ್ ರಾಜ್ಯದಲ್ಲಿ ಶೀತ ಅಲೆಯ ನಿರ್ಮಾಣವಾಗಲಿದೆ. ಮುಂದಿನ 2-3 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಾದ್ಯಂತ ಮಳೆಯಾಗಲಿದೆ.

ಗುಜರಾತ್‌ನಲ್ಲಿ ಕನಿಷ್ಠ ತಾಪಮಾನ 5-7 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ ಎಂದು IMD ಹೇಳಿದೆ; ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶದ ಮೇಲೆ 3-5 ಡಿಗ್ರಿ ಸೆಲ್ಸಿಯಸ್ ಮತ್ತು ಉತ್ತರ ಪ್ರದೇಶ, ಬಿಹಾರ, ಒಡಿಶಾ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 1-2 ಡಿಗ್ರ ಸೆಲ್ಸಿಯಸ್ ಇರಲಿದೆ.

Weather And Rain Forecast: Dry Weather Prevailed Over Karnataka On January 29 2022

ಮುಂಗಾರು ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು.

ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ 30 ರಿಂದ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಇತ್ತ ಉತ್ತರ ಭಾರತದಲ್ಲಿ ಹವಾಮಾನ ತದ್ವಿರುದ್ಧವಾಗಿದ್ದು, ಹಿಮಪಾತ ಮತ್ತು ಮಳೆಯಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ವರದಿಗಳು ಸಹ ಬರುತ್ತಿವೆ.

Recommended Video

Rohit Sharma ತಂಡಕ್ಕೆ ಫ್ಲೈಟ್ ವ್ಯವಸ್ಥೆ ಮಾಡದ BCCI | Oneindia Kannada

English summary
Weather and rain forecast as on January 29 2022: Dry Weather Prevailed Over Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X