Infographics: ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು, ಮಾರ್ಚ್ 11: ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಹಾಗೆಯೇ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳ ಕಾಲ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On March 11 2022

ಮುಂಬೈನಲ್ಲಿ 30.6 ಡಿಗ್ರಿ ಸೆಲ್ಸಿಯಸ್, ಚೆನ್ನೈನಲ್ಲಿ 26.8 ಡಿಗ್ರಿ ಸೆಲ್ಸಿಯಸ್, ಹೈದಾರಾಬಾದ್‌ನಲ್ಲಿ 27 ಡಿಗ್ರಿ ಸೆಲ್ಸಿಯಸ್, ಕೋಲ್ಕತ್ತಾದಲ್ಲಿ 26.2 ಡಿಗ್ರಿ ಸೆಲ್ಸಿಯಸ್, ಅಹಮದಾಬಾದ್‌ನಲ್ಲಿ 28 ಡಿಗ್ರಿ ಸೆಲ್ಸಿಯಸ್, ಪುಣೆಯಲ್ಲಿ 21 ಡಿಗ್ರಿ ಸೆಲ್ಸಿಯಸ್ ಹಾಗೂ ದೆಹಲಿಯಲ್ಲಿ 23.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಇನ್ನು ಮಾರ್ಚ್ 12 ರಿಂದ ಮಧ್ಯ ಭಾರತದ ವಾಯುವ್ಯದಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

Weather And Rain Forecast: Dry Weather Prevailed Over Karnataka On March 11 2022

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ಉತ್ತರ ಭಾಗಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಕೂಡಾ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ 3 ದಿನಗಳಲ್ಲಿ ಗುಜರಾತ್‌ನಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಏರಿಕೆಯಾಗುವ ನಿರೀಕ್ಷೆಯಿದೆ.

ಪಶ್ಚಿಮ ಮತ್ತು ದಕ್ಷಿಣ ಭಾರತದ ಕರಾವಳಿ ಪ್ರದೇಶದಲ್ಲಿ ಗಾಳಿ ಒಮ್ಮುಖವಾಗುವುದರಿಂದ ಶುಕ್ರವಾರ ಮಹಾರಾಷ್ಟ್ರ, ಗೋವಾ ಮತ್ತು ಕರಾವಳಿ ಕರ್ನಾಟಕದಲ್ಲಿ, ಮಾರ್ಚ್ 12-15 ರವರೆಗೆ ತಮಿಳುನಾಡಿನಲ್ಲಿ ಮತ್ತು ಮುಂದಿನ ಐದು ದಿನಗಳವರೆಗೆ ಕೇರಳದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Weather And Rain Forecast: Dry Weather Prevailed Over Karnataka On March 11 2022

ಶನಿವಾರದಿಂದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಹಿಮಪಾತ ಅಥವಾ ಮಳೆ ಸುರಿಯಲಿದೆ. ಇದಲ್ಲದೆ, ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಕಾರಣ ಶುಕ್ರವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆ ಬರುವ ಸಾಧ್ಯತೆಯಿದೆ. ಭಾರತದ ಇತರ ಭಾಗಗಳಲ್ಲಿ ಒಣಹವೆ ಇರಲಿದೆ.

ಈ ನಡುವೆ ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ ತಾಪಮಾನವು ಹೆಚ್ಚಾಗುವ ಸಾಧ್ಯತೆಯಿದೆ. ಭಾನುವಾರದಿಂದ ಗುಜರಾತ್‌ನಲ್ಲಿ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಸೋಮವಾರದಿಂದ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ ಮೀರುವ ನಿರೀಕ್ಷೆಯಿದೆ. ಪಶ್ಚಿಮ, ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಹಗಲಿನ ತಾಪಮಾನವು ಹೆಚ್ಚಾಗುವ ಸಾಧ್ಯತೆಯಿದೆ. ಮತ್ತೊಂದೆಡೆ, ಈ ಅವಧಿಯಲ್ಲಿ ಭಾರತದಾದ್ಯಂತ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+