Infographics: ಮಾ.12ರಂದು ರಾಜ್ಯದ ಹವಾಮಾನ ಹೇಗಿದೆ?

ಬೆಂಗಳೂರು, ಮಾರ್ಚ್ 11: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಶನಿವಾರ ಒಣ ಹವೆ ಇತ್ತು. ರಾಜ್ಯದಲ್ಲಿ ಅತೀ ಹೆಚ್ಚಿನ ಉಷ್ಣಾಂಶ 36.6 ಡಿಗ್ರಿ ಸೆಲ್ಸಿಯಸ್‌ ರಾಯಚೂರಿನಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶದಲ್ಲಿ ಅತೀ ಕಡಿಮೆ ಉಷ್ಣಾಂಶ 15 .8 ಡಿಗ್ರಿ ಸೆಲ್ಸಿಯಸ್‌ ದಾವಣಗೆರೆಯಲ್ಲಿ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಹಾಗೆಯೇ ಮುಂದಿನ 48 ಗಂಟೆಗಳಲ್ಲಿ ರಾಜ್ಯಾದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On March 12 2022

ಹೊನ್ನಾವರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On March 12 2022

ಮುಂಬೈನಲ್ಲಿ 31.8 ಡಿಗ್ರಿ ಸೆಲ್ಸಿಯಸ್, ಚೆನ್ನೈನಲ್ಲಿ 30.8 ಡಿಗ್ರಿ ಸೆಲ್ಸಿಯಸ್, ಹೈದಾರಾಬಾದ್‌ನಲ್ಲಿ 32.2 ಡಿಗ್ರಿ ಸೆಲ್ಸಿಯಸ್, ಕೋಲ್ಕತ್ತಾದಲ್ಲಿ 30.2 ಡಿಗ್ರಿ ಸೆಲ್ಸಿಯಸ್, ಅಹಮದಾಬಾದ್‌ನಲ್ಲಿ 36.2 ಡಿಗ್ರಿ ಸೆಲ್ಸಿಯಸ್, ಪುಣೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಹಾಗೂ ದೆಹಲಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

ಮುಂದಿನ ಎರಡು ದಿನಗಳ ಕಾಲ ಗುಜರಾತ್, ರಾಜಸ್ಥಾನ ಮತ್ತು ಒಡಿಶಾ ಸೇರಿದಂತೆ ಕೆಲವು ರಾಜ್ಯಗಳಲ್ಲಿ ತೀವ್ರ ಬಿಸಿಗಾಳಿ ಇರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ಮುನ್ಸೂಚನೆ ನೀಡಿದೆ. ಈ ನಡುವೆ ಪೂರ್ವ ಮತ್ತು ಮಧ್ಯ ಭಾರತದಲ್ಲಿ ತಾಪಮಾನವು ಕೆಲವು ಹಂತಗಳಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

Weather And Rain Forecast: Dry Weather Prevailed Over Karnataka On March 12 2022

ಮಾರ್ಚ್ 12 ಮತ್ತು 13 ರಂದು ಸೌರಾಷ್ಟ್ರ-ಕಚ್‌ನಲ್ಲಿ ಶಾಖದ ಅಲೆ ಕಾರಣ ಬಿಸಿಯ ವಾತಾವರಣ ಹೆಚ್ಚಾಗಲಿದೆ. 14 ಮತ್ತು 15 ರಂದು ಸೌರಾಷ್ಟ್ರ-ಕಚ್‌ನ ಬಿಸಿ ತಾಪ ವಾತಾವರಣ ಮುಂದುವರಿಯುತ್ತವೆ

15 ಮತ್ತು 16 ರಂದು ಒಡಿಶಾ ಮತ್ತು ಮಾರ್ಚ್ 16 ರಂದು ಪಶ್ಚಿಮ ರಾಜಸ್ಥಾನದಲ್ಲಿಯೂ ಶಾಖ ಹೆಚ್ಚಾಗಲಿದೆ.

ಮುಂದಿನ 4 ದಿನಗಳಲ್ಲಿ ಗುಜರಾತ್ ರಾಜ್ಯದಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಮುಂದಿನ 3 ದಿನಗಳಲ್ಲಿ ವಾಯುವ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ 3-5 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆಯಿದೆ. (ಒನ್‌ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+