Infographics:ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
ಬೆಂಗಳೂರು, ಮಾರ್ಚ್ 21: ರಾಜ್ಯದ ಒಳನಾಡಿನ ಹಲವಾರು ಪ್ರದೇಶಗಳಲ್ಲಿ ಮಳೆಯಾಗಿದ್ದು ಉಳಿದಂತೆ ಕರಾವಳಿಯಲ್ಲಿ ಒಣ ಹವೆ ಮುಂದುವರಿದಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಹಾಗೆಯೇ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂಬೈನಲ್ಲಿ 31.8 ಡಿಗ್ರಿ ಸೆಲ್ಸಿಯಸ್, ಚೆನ್ನೈನಲ್ಲಿ 35.6 ಡಿಗ್ರಿ ಸೆಲ್ಸಿಯಸ್, ಹೈದಾರಾಬಾದ್‌ನಲ್ಲಿ 37.4 ಡಿಗ್ರಿ ಸೆಲ್ಸಿಯಸ್, ಕೋಲ್ಕತ್ತಾದಲ್ಲಿ 34.6 ಡಿಗ್ರಿ ಸೆಲ್ಸಿಯಸ್, ಅಹಮದಾಬಾದ್‌ನಲ್ಲಿ 38.6 ಡಿಗ್ರಿ ಸೆಲ್ಸಿಯಸ್, ಪುಣೆಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಹಾಗೂ ದೆಹಲಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಹಾಗೆಯೇ ಬಲವಾದ ಗಾಳಿ ಬೀಸುವ ಸಾಧ್ಯತೆ ಕೂಡಾ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.
ದೇಶದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಸನಿ ಚಂಡಮಾರುತದ ಬಗ್ಗೆ ಎಚ್ಚರಿಕೆಯ ಮಧ್ಯೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಸನಿ ಚಂಡಮಾರುತವು ಸೋಮವಾರ ಅಂಡಮಾನ್ ಸಮುದ್ರದ ಮೇಲೆ ಅಪ್ಪಳಿಸಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ರಕ್ಷಣಾ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಇದು 2022 ರ ಮೊದಲ ಚಂಡಮಾರುತವಾಗಿದ್ದು, ರಕ್ಷಣಾ ತಂಡಗಳು ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಈ ಚಂಡಮಾರುತದಿಂದಾಗಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.












Click it and Unblock the Notifications