Infographics:ರಾಜ್ಯದ ಕೆಲವೆಡೆ ಮಳೆ, ಕರಾವಳಿಯಲ್ಲಿ ಒಣಹವೆ

ಬೆಂಗಳೂರು, ಮಾರ್ಚ್ 23: ರಾಜ್ಯದ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿಯಲ್ಲಿ ಒಣ ಹವೆ ಇತ್ತು. ಬೆಳವಾಗಿ, ಧಾರವಾಡ, ಹರಪನಹಳ್ಳಿ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 40.4 ಡಿಗ್ರಿ ಸೆಲ್ಸಿಯಸ್‌ ರಾಯಚೂರಿನಲ್ಲಿ ಇದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲೂ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮುಕೂರಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮನ್ಸೂಚನೆ ನೀಡಿದೆ.

Weather And Rain Forecast: Dry Weather Prevailed Over Karnataka On March 23, 2022

ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On March 23, 2022

ಹೊನ್ನಾವರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂಬೈನಲ್ಲಿ 35.2 ಡಿಗ್ರಿ ಸೆಲ್ಸಿಯಸ್, ಚೆನ್ನೈನಲ್ಲಿ 34.4 ಡಿಗ್ರಿ ಸೆಲ್ಸಿಯಸ್, ಹೈದಾರಾಬಾದ್‌ನಲ್ಲಿ 37.4 ಡಿಗ್ರಿ ಸೆಲ್ಸಿಯಸ್, ಕೋಲ್ಕತ್ತಾದಲ್ಲಿ 34.4 ಡಿಗ್ರಿ ಸೆಲ್ಸಿಯಸ್, ಅಹಮದಾಬಾದ್‌ನಲ್ಲಿ 36.6 ಡಿಗ್ರಿ ಸೆಲ್ಸಿಯಸ್, ಪುಣೆಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಹಾಗೂ ದೆಹಲಿಯಲ್ಲಿ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

Weather And Rain Forecast: Dry Weather Prevailed Over Karnataka On March 23, 2022

ಅರುಣಾಚಲ ಪ್ರದೇಶ, ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶ, ಮುರಾಝಬಾದ್‌, ಲಡಾಕ್‌, ಕಾಶ್ಮೀರದಲ್ಲಿ ಮಾರ್ಚ್ 23 ಹಾಗೂ 24ರಂದು ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಉತ್ತರಾಖಂಡದಲ್ಲಿ ಮಾರ್ಚ್ 24ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮುಂದಿನ ನಾಲ್ಕು ದಿನಗಳಲ್ಲಿ ಕೇರಳ, ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ, ಕರ್ನಾಟಕದಲ್ಲ ಸಾಮಾನ್ಯ ಮಳೆಯಾಗಲಿದೆ. ಇನ್ನುಳಿದಂತೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿಯೂ ಮುಂಂದಿನ ನಾಲ್ಕು ದಿನಗಳಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+