Infographics: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ಮಾರ್ಚ್ 24: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿಯಲ್ಲಿ ಭಾರೀ ಮಳೆಯಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚಿನ ಉಷ್ಣಾಂಶ 41.0 ಡಿ.ಸೆ. ರಾಯಚೂರಿನಲ್ಲಿ ದಾಖಲಾಗಿದೆ.

ಜಯಪುರ (ಚಿಕ್ಕಮಗಳೂರು ಜಿಲ್ಲೆ); ಸುಬ್ರಹ್ಮಣ್ಯ (ದಕ್ಷಿಣ ಕನ್ನಡ ಜಿಲ್ಲೆ), ಕುಂದಾಪುರ, ಸಿದ್ಧಾಪುರ (ಉಡುಪಿ ಜಿಲ್ಲೆ), ನಾಪೋಕ್ಲು (ಕೊಡಗು ಜಿಲ್ಲೆ), ಕೊಪ್ಪ, ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ), ಚಿಕ್ಕಮಗಳೂರು, ಹಾಸನ, ಬೆಳ್ತಂಗಡಿ, ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ, ಶ್ರೀಮಂಗಲ (ಕೊಡಗು ಜಿಲ್ಲೆ), ಮಂಡಗದ್ದೆ (ಶಿವಮೊಗ್ಗೆ ಜಿಲ್ಲೆ), ಶೃಂಗೇರಿ (ಚಿಕ್ಕಮಗಳೂರು ಜಿಲ್ಲೆ), ಆಲೂರು (ಹಾಸನ ಜಿಲ್ಲೆ), ಹುಂಚದಕಟ್ಟೆ, ಅಗ್ರಹಾರ ಕೋಣಂದೂರು, ಕಾಣಿಕೆರೆ (ಶಿವಮೊಗ್ಗ ಜಿಲ್ಲೆ), ಶ್ರವಣಬೆಳಗೊಳ (ಹಾಸನ ಜಿಲ್ಲೆ), ಸರಗೂರು (ಮೈಸೂರು ಜಿಲ್ಲೆ), ತಿಪಟೂರು, ಕುಣಿಗಲ್, ಬುಕ್ಕಪಟ್ಟಣ (ತುಮಕೂರು ಜಿಲ್ಲೆ) ದಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ರಾಜ್ಯದಾದ್ಯಂತ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Weather And Rain Forecast: Dry Weather Prevailed Over Karnataka On March 24, 2022

ಬೆಂಗಳೂರಿನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On March 24, 2022

ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On March 24, 2022

ಮುಂಬೈನಲ್ಲಿ 31.6 ಡಿಗ್ರಿ ಸೆಲ್ಸಿಯಸ್, ಚೆನ್ನೈನಲ್ಲಿ 30.6 ಡಿಗ್ರಿ ಸೆಲ್ಸಿಯಸ್, ಹೈದಾರಾಬಾದ್‌ನಲ್ಲಿ 32.8 ಡಿಗ್ರಿ ಸೆಲ್ಸಿಯಸ್, ಕೋಲ್ಕತ್ತಾದಲ್ಲಿ 29.8 ಡಿಗ್ರಿ ಸೆಲ್ಸಿಯಸ್, ಅಹಮದಾಬಾದ್‌ನಲ್ಲಿ 36.4 ಡಿಗ್ರಿ ಸೆಲ್ಸಿಯಸ್, ಪುಣೆಯಲ್ಲಿ 32 ಡಿಗ್ರಿ ಸೆಲ್ಸಿಯಸ್ ಹಾಗೂ ದೆಹಲಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

ಗೋವಾ, ಕರ್ನಾಟಕ, ತಮಿಳುನಾಡು, ಕೇರಳ, ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶದಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಾರ್ಚ್ 24ರಿಂದ 28ರವರೆಗೆ ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

Weather And Rain Forecast: Dry Weather Prevailed Over Karnataka On March 24, 2022

ಗುರುವಾರದಿಂದ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ, ಕರ್ನಾಟಕ ಮತ್ತು ತಮಿಳುನಾಡಿನಾದ್ಯಂತ ಗುರುವಾರ-ಶುಕ್ರವಾರ, ಕೇರಳದಲ್ಲಿ ಗುರುವಾರದಿಂದ ಮುಂದಿನ ಸೋಮವಾರದವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಈ ನಿಟ್ಟಿನಲ್ಲಿ ಐಎಂಡಿ ಎಚ್ಚರಿಕೆಯನ್ನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+