ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಕರ್ನಾಟಕದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಮಳೆ

|
Google Oneindia Kannada News

ಬೆಂಗಳೂರು, ಮಾರ್ಚ್ 3: ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿಯಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ 32ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.7ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On March 3 2022

ಹೊನ್ನಾವರದಲ್ಲಿ 33.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ ಮತ್ತು ಒಡಿಶಾದಲ್ಲಿ ಶೀತ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಶೀತ ಅಲೆ ಉಂಟಾಗಲಿದೆ.

Weather And Rain Forecast: Dry Weather Prevailed Over Karnataka On March 3 2022

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಮಾರ್ಚ್ 5ರವರೆಗೆ ಶೀತ ಗಾಳಿ ಸಹಿತ ಮಳೆಯಾಗಲಿದೆ. ಇಂದು ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸಾಧಾರಣ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ.
ಹಾಗೇ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಹಿಮ ಬೀಳುವ ನಿರೀಕ್ಷೆಯಿದೆ. ಇಂದು ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ತ್ರಿಪುರ, ಮಣಿಪುರ ಮತ್ತು ಮಿಜೋರಾಂನಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ.

Weather And Rain Forecast: Dry Weather Prevailed Over Karnataka On March 3 2022

ಇಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಬಿಹಾರ, ಜಾರ್ಖಂಡ್ ಮತ್ತು ಮಾ.4 ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್‌, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ.

ದೆಹಲಿ ಮತ್ತು NCR (ಹಿಂಡಾನ್, ಲೋನಿ ದೇಹಾತ್, ಘಾಜಿಯಾಬಾದ್, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ್)ದಲ್ಲಿ ಮತ್ತು ಪಕ್ಕದ ಪ್ರದೇಶಗಳಲ್ಲಿ 20-30 ಕಿಮೀ ವೇಗದಲ್ಲಿ ಲಘುವಾಗಿ ಗಾಳಿ, ಗುಡುಗು ಸಹಿತ ಮಳೆಯಾಗುತ್ತದೆ ಎಂದು IMD ತಿಳಿಸಿದೆ.

Weather And Rain Forecast: Dry Weather Prevailed Over Karnataka On March 3 2022

ಇಂದು ಉತ್ತರಾಖಂಡದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದ್ದು, ಕಂಗ್ರಾ, ಚಂಬಾ, ಕುಲು, ಕಿನ್ನೌರ್ ಮತ್ತು ಲಾಹುಲ್ ಮತ್ತು ಸ್ಪಿತಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಹಿಮ ಉಂಟಾಗಲಿದೆ.

ಉತ್ತರಾಖಂಡಕ್ಕೆ ಸಂಬಂಧಿಸಿದಂತೆ ಗುರುವಾರ ಡೆಹ್ರಾಡೂನ್, ನೈನಿತಾಲ್, ಚಂಪಾವತ್, ಉಧಮ್ ಸಿಂಗ್ ನಗರ, ತೆಹ್ರಿ ಗರ್ವಾಲ್, ಪೌರಿ ಗರ್ವಾಲ್, ರುದ್ರಪ್ರಯಾಗ, ಚಮೋಲಿ, ಅಲ್ಮೋರಾ, ಬಾಗೇಶ್ವರ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಫೆಬ್ರವರಿ 5ರಿಂದ ವಾಯು ಗುಣಮಟ್ಟವು ಕ್ರಮೇಣ ಕ್ಷೀಣಿಸುತ್ತದೆ.

Recommended Video

Must watch video : ಚಿಕ್ಕ ವಯಸ್ಸಿನಿಂದ ಈ ಪಾದಯಾತ್ರೆ ನೊಡ್ತಿದಿನಿ ! | Oneindia Kannada

English summary
Weather and rain forecast as on March 3 2022: Dry Weather Prevailed Over Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X