Infographics: ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು, ಮಾರ್ಚ್ 5: ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. 48 ಗಂಟೆಗಳ ಕಾಲ ಒಣಹವೆ ಮುಂದುವರಿಯಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On March 8 2022

ಮುಂಬೈನಲ್ಲಿ 35°, ಚೆನ್ನೈನಲ್ಲಿ 32.6°, ಹೈದಾರಾಬಾದ್‌ನಲ್ಲಿ 33.4°, ಕೋಲ್ಕತ್ತಾದಲ್ಲಿ 31.6°, ಅಹಮದಾಬಾದ್‌ನಲ್ಲಿ35.6°, ಪುಣೆಯಲ್ಲಿ 32.8° ಹಾಗೂ ದೆಹಲಿಯಲ್ಲಿ 30.2° ಡಿಗ್ರಿ ಉಷ್ಣಾಂಶವಿದೆ. ಇನ್ನು ಪುಣೆಯಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

Weather And Rain Forecast: Dry Weather Prevailed Over Karnataka On March 8 2022

ದೆಹಲಿಯಲ್ಲಿ ಮುಂದಿನ ಆರು ದಿನಗಳಲ್ಲಿ ಉಷ್ಣಾಂಶ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಮಾರ್ಚ್ 13ರಂಷು ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ. ಮಾರ್ಚ್ 9-10ರಂದು ದೆಹಲಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಲಡಾಖ್‌, ಹಿಮಾಚಲ ಪ್ರದೇಶ ಹಾಗೂ ಜಮ್ಮು ಕಾಶ್ಮೀರದಲ್ಲಿ ಹಿಮಪಾತ ಹಾಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಕೂಡಾ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Weather And Rain Forecast: Dry Weather Prevailed Over Karnataka On March 8 2022

ಇನ್ನು ಮಹಾರಾಷ್ಟ್ರ, ಗುಜರಾತ್‌ ಹಾಗೂ ಮಧ್ಯ ಪ್ರದೇಶದಲ್ಲಿ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ. ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಪಾಲ್ಗಾರ್‌, ಥಾಣೆ, ರಾಯಗಢ, ರತ್ನಗಿರಿಯಲ್ಲಿ ಗುಡುಗು ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಮಾರ್ಚ್‌ 8-9ರಂದು ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆಯನ್ನು ಈಗಾಗಲೇ ಹವಾಮಾನ ಇಲಾಖೆಯು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+