ಜನವರಿ 01ರಂದು ರಾಜ್ಯದ ವಿವಿಧ ಜಿಲ್ಲೆಗಳ ಹವಾಮಾನ ಹೇಗಿದೆ?
ಕಳೆದ 15 ದಿನಗಳಿಂದ ಬಿಡುವುಕೊಟ್ಟಿದ್ದ ಮಳೆ ಇದೀಗ ಬೆಂಗಳೂರು, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸುರಿಯುತ್ತಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ನೆರೆಯ ತಮಿಳುನಾಡಿನಲ್ಲಿ ವರುಣ ಆರ್ಭಟಿಸುತ್ತಿದ್ದು, ರಾಜ್ಯದ ಹಲವೆಡೆಯೂ ಜ. 1 ಮತ್ತು 2 ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೊಡಗು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಎರಡು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದೇ ವೇಳೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಎಂದಿನಂತೆ ಒಣ ಹವೆ ಮುಂದುವರಿಯಲಿದೆ. ಶುಕ್ರವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿತ್ತು. ಚಿಕ್ಕಮಗಳೂರು ಸೇರಿ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯೂ ಆಗಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ವರದಿಯ ಪ್ರಕಾರ, ಜನವರಿ ಒಂದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ. ತಮಿಳುನಾಡು ಮಾತ್ರವಲ್ಲದೆ. ಪುದುಚೇರಿ, ಕಾರೈಕಲ್ ಮತ್ತು ಆಂಧ್ರಪ್ರದೇಶದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ. ಚಳಿಗಾಲ ಆರಂಭವಾದ ವೇಳೆಯಲ್ಲಿ ಕರ್ನಾಟಕದಲ್ಲಿ ಅಕಾಲಿಕ ಮಳೆಯಾಗುತ್ತಿತ್ತು.

ಆದರೆ ಮಳೆ ನಿಂತು ಈಗ ಚಳಿ ಶುರುವಾಗಿದೆ. ಆದರೆ ಈಗ ಹವಾಮಾನ ಇಲಾಖೆಯ ನೀಡಿರುವ ವರದಿಯ ಪ್ರಕಾರ ಜನವರಿ ಮೊದಲ ವಾರದಲ್ಲಿ ಹಿಂದೆಂದಿಗಿಂತಲೂ ಅಧಿಕ ಚಳಿ ರಾಜ್ಯದಲ್ಲಿ ಇರಲಿದೆಯಂತೆ. ಇದರ ನಡುವೆ ನೆರೆಯ ರಾಜ್ಯಗಳಾದ ತಮಿಳುನಾಡಿನಲ್ಲಿ ಅಕಾಲಿಕವಾಗಿ ಭಾರೀ ಮಳೆಯಾಗುತ್ತಿದೆ.
ಮಳೆಯ ಅಬ್ಬರಕ್ಕೆ ಚೆನ್ನೈನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಡಿಸೆಂಬರ್‌ನ ಬಹುಪಾಲು ಅವಧಿಯಲ್ಲಿ ತಮಿಳುನಾಡಿನಲ್ಲಿ ಕಡು ಬಿಸಿಲಿತ್ತು. ಆದರೆ, ಇಂದಿನಿಂದ ಭಾರೀ ಮಳೆ ಶುರುವಾಗಿದ್ದು, ಇನ್ನೊಂದು ವಾರ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ.
ಜನವರಿ 1ರಂದು ತಮಿಳುನಾಡು ಕರಾವಳಿ ತೀರಕ್ಕೆ ಮಾರುತಗಳು ದಾಳಿ ಮಾಡಲಿರುವುದರಿಂದ ಜನವರಿ 1ರಿಂದ ತಮಿಳುನಾಡಿನಾದ್ಯಂತ ಮಳೆ ಹೆಚ್ಚಾಗಲಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ದಕ್ಷಿಣ ಆಂಧ್ರಪ್ರದೇಶದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ.
ಇನ್ನು ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಶನಿವಾರದಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ ಮತ್ತು ಶನಿವಾರದಂದು ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ಕಾರೈಕಾಲ್ ಮತ್ತು ಪುದುಚೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ.ಚೆನ್ನೈನಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ದಕ್ಷಿಣ ಭಾರತ ಮಾತ್ರವಲ್ಲದೇ ಉತ್ತರ ಭಾರತದಲ್ಲಿ ಶೀತಗಾಳಿ ಹೆಚ್ಚಾಗಲಿದ್ದು ಹಲವು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಬಹುಮುಖ್ಯವಾಗಿ ಹರಿಯಾಣ ಮಹಾರಾಷ್ಟ್ರ ಮಧ್ಯಪ್ರದೇಶ ಉತ್ತರಪ್ರದೇಶ ರಾಜಸ್ಥಾನದಲ್ಲಿ ಶೀತಗಾಳಿ ಹಾಗೂ ಮಳೆ ಬೀಳಲಿದೆ. ಜನವರಿ 2 ರವರೆಗೆ ಪಂಜಾಬ್ ಹಾಗೂ ಹರಿಯಾಣ ಮತ್ತು ಚಂಡಿಗಡದಲ್ಲಿ ಹಗುರ ಮಳೆಯಾಗಲಿದೆ
ನೆರೆಯ ತಮಿಳುನಾಡಿನಲ್ಲಿ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆಯಾಗಲಿದೆ. ತಮಿಳುನಾಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ತುಸು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.












Click it and Unblock the Notifications