ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Inforgraphics: ಜ.12ರಿಂದ 4 ದಿನ ರಾಜ್ಯದ 10 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಜನವರಿ 11: ರಾಜ್ಯದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜನವರಿ 12 ರಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

 Infographics: ಜ.10ರಂದು ರಾಜ್ಯದ ವಿವಿಧ ಜಿಲ್ಲೆಗಳ ವಾತಾವರಣ ಹೇಗಿದೆ? Infographics: ಜ.10ರಂದು ರಾಜ್ಯದ ವಿವಿಧ ಜಿಲ್ಲೆಗಳ ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಸ್ವಲ್ಪ ಮೋಡಕವಿದ ವಾತಾವರಣವಿದೆ, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Rainfall Across State As On January 11 2022

ಹೊನ್ನಾವರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದಲ್ಲಿ ಮಾತ್ರವಲ್ಲದೆ ಆಂಧ್ರಪ್ರದೇಶ, ತಮಿಳುನಾಡು, ಅಸ್ಸಾಂ, ಮಧ್ಯಪ್ರದೇಶ ಮುಂತಾದೆಡೆ ಮಳೆ ಹೆಚ್ಚಾಗಿದೆ. ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢ ಸೇರಿದಂತೆ ಮಧ್ಯ ಭಾರತದಲ್ಲಿ ಬಂಗಾಳಕೊಲ್ಲಿಯಿಂದ ದಕ್ಷಿಣ ದಿಕ್ಕಿನ ಮಾರುತಗಳೊಂದಿಗೆ ಅರಬ್ಬಿ ಸಮುದ್ರದಿಂದ ತೇವಾಂಶದಿಂದ ಕೂಡಿದ ಗಾಳಿ ಬೀಸಲಿದೆ. ಇಂದಿನಿಂದ ಶುಕ್ರವಾರದವರೆಗೆ ಪೂರ್ವ ಭಾರತ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಅಧಿಕವಾಗಲಿದೆ.

Weather And Rain Forecast: Rainfall Across State As On January 11 2022

ಹಾಗೇ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಬುಧವಾರ ಮತ್ತು ಗುರುವಾರ (ಜನವರಿ 12-13) ಸಾಕಷ್ಟು ವ್ಯಾಪಕ ಮಳೆಯಾಗಲಿದೆ. ಮಳೆಯ ಜೊತೆಗೆ ಈ ವಾರ ಕೆಲವು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹ ಉಂಟಾಗುವ ಸಾಧ್ಯತೆಯಿದೆ. ಇಂದು (ಮಂಗಳವಾರ) ಅಸ್ಸಾಂ ಮತ್ತು ಮೇಘಾಲಯಕ್ಕೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಹಾಗೇ, ನಾಳೆ (ಬುಧವಾರ) ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಳೆ ಹೆಚ್ಚಾಗುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ದೆಹಲಿ ನಗರದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದ್ದು, ಇಂದು ಮತ್ತು ಜನವರಿ 17ರ ನಡುವೆ ಯಾವುದೇ ತೊಂದರೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಸ್ಥಾನ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಕೂಡ ಮಳೆಯಾಗಲಿದೆ. ಒಡಿಶಾದಲ್ಲಿ ಇಂದು ಮತ್ತು ಜನವರಿ 12 ರಂದು ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
ಇಂದು (ಜನವರಿ 11) ಮತ್ತು 12ರಂದು ಒಡಿಶಾ ರಾಜ್ಯಕ್ಕೆ ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಇಂದು ಈ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗಲಿದೆ. ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಇಂದಿನಿಂದ ಜನವರಿ 13ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

Weather And Rain Forecast: Rainfall Across State As On January 11 2022

ಕರ್ನಾಟಕದಲ್ಲಿ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಕಾಣಿಸಿಕೊಂಡಿದೆ. ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮಳೆ ಶುರುವಾಗಿದೆ. ಇಂದಿನಿಂದ ಜನವರಿ 13ರವರೆಗೆ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತುಂಬಿ ನಿಂತಿದ್ದ ಕೆಆರ್​ಎಸ್​, ತುಂಗಾಭದ್ರಾ, ಭದ್ರಾ ಡ್ಯಾಂಗಳ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 87, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 79, ಘಟಪ್ರಭಾ ಶೇ. 69, ಲಿಂಗನಮಕ್ಕಿ ಶೇ. 74, ಹಾರಂಗಿ ಶೇ. 87, ಆಲಮಟ್ಟಿ ಡ್ಯಾಂ ಶೇ. 86ರಷ್ಟು ಭರ್ತಿಯಾಗಿವೆ.

Recommended Video

Pant out of 3rd Test? ಕುತೂಹಲ ಮೂಡಿಸಿದ ಸಾಹ ಟ್ವಿಟ್ಟರ್ ಪೋಸ್ಟ್:ಇವತ್ತು ಯಾರು ಇನ್ ಯಾರು ಔಟ್?|Oneindia Kannada

English summary
Weather and rain forecast as on January 10: Rainfall Across Karnataka this week says IMD report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X