ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಕೆಲವೆಡೆ ಮಳೆ, ಕರವಾಳಿ-ಉತ್ತರ ಒಳನಾಡಿನಲ್ಲಿ ಒಣಹವೆ

|
Google Oneindia Kannada News

ಬೆಂಗಳೂರು, ಮೇ 2: ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಭಾರೀ ಮಳೆಯಾಗಿದೆ. ಮುಂದಿನ ಎರಡು ದಿನ ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 43.5 ಡಿಗ್ರಿ ಸೆಲ್ಸಿಯಸ್‌ ಕಲಬುರಗಿಯಲ್ಲಿ ಇದೆ.

ಬೆಂಗಳೂರು ನಗರ, ಕೊಡಗು ಜಿಲ್ಲೆಯ ಪೊನ್ನಂಪೇಟೆ, ಮೈಸೂರು ಜಿಲ್ಲೆಯ ಕೆ ಆರ್‌ ನಗರ, ಮಂಡ್ಯದ ಕೃಷ್ಣರಾಜಪೇಟೆ, ಹೊನಕೆರೆ, ಮಳವಳ್ಳಿ, ಬೆಳ್ಳೂರು, ರಾಮನಗರ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ಹೆಸರಘಟ್ಟ, ಜಿಕೆವಿಕೆ, ಹೊಸಕೋಟೆ, ದೇವನಹಳ್ಳಿ, ನೆಲಮಂಗಲ, ಶ್ರವಣಬೆಳಗೊಳ, ಹುಣಸೂರು, ಬಿಳಿಕೆರೆ, ಮೈಸೂರು, ಕೋಲಾರ, ತುರುವೇಕೆರೆಯಲ್ಲಿ ಮಳೆಯಾಗಿದೆ.

 ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ, ಮಳೆ: ಜನರ ಪರದಾಟ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ, ಮಳೆ: ಜನರ ಪರದಾಟ

ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಎರಡು ದಿನ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ತಿಳಿಸಿದೆ.

Weather And Rain Forecast: Rainfall Occurred at Many Places Over Karnataka On May 2, 2022

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಾಬಳ್ಳಾಪುರ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಿಂಚಿನ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಹಾಗೆಯೇ ಗುಡುಗು ಮಳೆಯಾಗುವ ಸಾಧ್ಯತೆ ಇದೆ ಎಂದು ಕೂಡಾ ಇಲಾಖೆ ಮಾಹಿತಿ ನೀಡಿದೆ.

Weather And Rain Forecast: Rainfall Occurred at Many Places Over Karnataka On May 2, 2022

ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 35.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Rainfall Occurred at Many Places Over Karnataka On May 2, 2022

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 50 mm ಮಳೆ ದಾಖಲು ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 50 mm ಮಳೆ ದಾಖಲು

ಮುಂಬೈನಲ್ಲಿ 33.11 ಡಿಗ್ರಿ ಸೆಲ್ಸಿಯಸ್, ಚೆನ್ನೈನಲ್ಲಿ 30.8 ಡಿಗ್ರಿ ಸೆಲ್ಸಿಯಸ್, ಹೈದಾರಾಬಾದ್‌ನಲ್ಲಿ 33.8 ಡಿಗ್ರಿ ಸೆಲ್ಸಿಯಸ್, ಕೋಲ್ಕತ್ತಾದಲ್ಲಿ 31.8 ಡಿಗ್ರಿ ಸೆಲ್ಸಿಯಸ್, ಅಹಮದಾಬಾದ್‌ನಲ್ಲಿ 41.6 ಡಿಗ್ರಿ ಸೆಲ್ಸಿಯಸ್, ಪುಣೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಹಾಗೂ ದೆಹಲಿಯಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

ದೇಶದ ಹೆಚ್ಚಿನ ಭಾಗಗಳಲ್ಲಿ ಬಿಸಿ ಅಲೆಯು ಕಡಿಮೆಯಾಗಿದೆ. ಆದರೆ ಪಶ್ಚಿಮದಲ್ಲಿ ಬಿಸಿಗಾಳಿ ಹೆಚ್ಚಳದ ಬಗ್ಗೆ IMD ವಾಯುವ್ಯ ಭಾರತಕ್ಕೆ ಯೆಲ್ಲೋ ಅಲರ್ಟ್ ನೀಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೇ 3 ರಂದು ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಐ ಹವಾಮಾನ ಇಲಾಖೆಯು ಹೇಳಿದೆ. ರಾಜಸ್ಥಾನ, ದೆಹಲಿ, ಹರಿಯಾಣ ಮತ್ತು ಪಂಜಾಬ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದೆ.

English summary
Weather and rain forecast as on May 2, 2022: Rainfall Occurred at Many Places Over Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X