Infographics: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 28: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್, ಗದಗ ಜಿಲ್ಲೆಯ ಶಿರಹಟ್ಟಿ, ಬೆಳಗಾವಿ ಜಿಲ್ಲೆಯ ಲೋಂಡಾ, ಶಿವಮೊಗ್ಗ ಜಿಲ್ಲೆಯ ಕಾಟಿಕೆರೆಯಲ್ಲಿ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವಾರು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 41.6 ಡಿಗ್ರಿ ಸೆಲ್ಸಿಯಸ್‌ ಕಲಬುರಗಿಯಲ್ಲಿ ಇದೆ.

ಮುಂದಿನ ಎರಡು ದಿನ ರಾಜ್ಯದ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಾಗಿಲ್ಲ.

ಇನ್ನು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಿಂಚಿನ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮನ್ಸೂಚನೆ ನೀಡಿದೆ.

Weather And Rain Forecast: Rainfall Occurred at Isolated Places Over Karnataka On April 28, 2022

ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Rainfall Occurred at Isolated Places Over Karnataka On April 28, 2022

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಸಂಜೆ, ರಾತ್ರಿಯ ವೇಳೆ ಗುಡುಗು, ಮಿಂಚಿನ ಸಾಧ್ಯತೆ ಇದೆ. ಗರಿಷ್ಠ 36 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ಕೂಡಾ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಮುಂಬೈನಲ್ಲಿ 33.2 ಡಿಗ್ರಿ ಸೆಲ್ಸಿಯಸ್, ಚೆನ್ನೈನಲ್ಲಿ 33 ಡಿಗ್ರಿ ಸೆಲ್ಸಿಯಸ್, ಹೈದಾರಾಬಾದ್‌ನಲ್ಲಿ 29 ಡಿಗ್ರಿ ಸೆಲ್ಸಿಯಸ್, ಕೋಲ್ಕತ್ತಾದಲ್ಲಿ 33 ಡಿಗ್ರಿ ಸೆಲ್ಸಿಯಸ್, ಅಹಮದಾಬಾದ್‌ನಲ್ಲಿ 42.8 ಡಿಗ್ರಿ ಸೆಲ್ಸಿಯಸ್, ಪುಣೆಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಹಾಗೂ ದೆಹಲಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

Weather And Rain Forecast: Rainfall Occurred at Isolated Places Over Karnataka On April 28, 2022

ಏಪ್ರಿಲ್ ಹೊತ್ತಿಗೆ, ದೇಶದ ಹಲವಾರು ರಾಜ್ಯದಲ್ಲಿ ತಾಪಮಾನ ತೀವ್ರ ಮಟ್ಟಕ್ಕೆ ಏರಿಕೆ ಕಂಡಿದೆ. ರಾಜಧಾನಿ ದೆಹಲಿ ಸೇರಿದಂತೆ ಇಡೀ ಉತ್ತರ ಭಾರತದಲ್ಲಿ ಬಿಸಿಲಿನ ತಾಪಕ್ಕೆ ಜನ ಪರದಾಡುವಂತಾಗಿದೆ. ಇಂದು ದೆಹಲಿಯ ಕೆಲವು ಭಾಗಗಳಲ್ಲಿ ತಾಪಮಾನ 45-46 ಡಿಗ್ರಿ ತಲುಪಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿ ಮಾತ್ರವಲ್ಲದೆ, ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕೂ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ನಿನ್ನೆಯವರೆಗೂ ದೆಹಲಿಯಲ್ಲಿ ಆರೆಂಜ್ ಅಲರ್ಟ್ ಇತ್ತು. ಹೆಚ್ಚುತ್ತಿರುವ ಶಾಖದಿಂದಾಗಿ, ಸಣ್ಣ ಮಕ್ಕಳು, ವೃದ್ಧರು ಮತ್ತು ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಅಸ್ವಸ್ಥತೆ ಅಧಿಕವಾಗುತ್ತಿದೆ ಎಂದು ಐಎಂಡಿ ಹೇಳಿದೆ.

Recommended Video

      ಪುಷ್ಪಾ ಸಿನಿಮಾದ ಹೂಂ ಅಂಟಾವ ಹಾಡಿಗೆ ಸಖತ್ ಸ್ಟೆಪ್ ಹಾಕಿ ಮಿಂಚಿದ Virat Kohli ವಿಡಿಯೋ ವೈರಲ್ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+