Infographics: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಏಪ್ರಿಲ್ 29: ರಾಜ್ಯದ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವುಯ ಕಡೆಗಳಲ್ಲಿ ಮಳೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಕೆರೂರು, ಗದಗ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ. ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42.3 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ಇದೆ.
ಇನ್ನು ಬೆಳಗಾವಿಯ ಬೈಲಹೊಂಗಲ, ಚಿಕ್ಕೋಡಿ, ಹಿಡಿಕಲ್ ಅಣೆಕಟ್ಟು, ಬಳ್ಳಾರಿಯ ಹಗರಿಬೊಮ್ಮನಹಳ್ಳಿ, ಸಂಡೂರು, ಹಾವೇರಿಯ ಪಿಟಿಒ, ದೇವೆಹೊಸೂರು ಆಗ್ರೋ, ಗುತ್ತಲ, ಸವಣೂರು, ಚಿತ್ರದುರ್ಗದ ಹೊಸದುರ್ಗಾ, ಉತ್ತರ ಕನ್ನಡ ಜಿಲ್ಲೆಯ ಬನವಾಸಿ, ಮಂಚಿಕೆರೆ, ಕೊಪ್ಪಳ್ಳ ಜಿಲ್ಲೆಯ ಯಲಬುರ್ಗಾ, ಗದಗದ ನರಗುಂದ, ರೋಣ, ಬೆಳ್ಳಟ್ಟಿ, ಶಿರಹಟ್ಟಿ, ರಾಯಚೂರಿನ ಸಿಂಧನೂರು, ಚಿಕ್ಕಮಗಳೂರಿನ ಯಗತಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹಲವಾರು ಭಾಗದಲ್ಲಿ, ಉತ್ತರಕನ್ನಡದ ಸಿರ್ಸಿ ಆಗ್ರೋದಲ್ಲಿ, ಕೊಪ್ಪಳ, ಕುಷ್ಟಗಿ, ಗಂಗಾವತಿ, ರಾಮದುರ್ಗ, ಸಂಕೇಶ್ವರ, ಬಾದಾಮಿ, ಶಿಗ್ಗಾಂವ, ಶೋರಾಪುರ, ನಂಜನಗೂಡು, ರಾಮಗಿರಿ, ಹಡಗಲಿ, ಶಿವಮೊಗ್ಗ, ಚನ್ನಗಿರಿ, ಹರಪನಹಳ್ಳಿ, ಹೊಳೆ ಹೊನ್ನೂರು, ಬುಕ್ಕಪಟ್ಟಣ ಮೊದಲಾದೆಡೆ ಮಳೆಯಾಗಿದೆ.
ಮುಂದಿನ ಎರಡು ದಿನ ರಾಜ್ಯದ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಾಗಿಲ್ಲ.

ಇನ್ನು ಮುಂದಿನ ಎರಡು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಿಂಚಿನ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ 36 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ಕೂಡಾ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಮುಂಬೈನಲ್ಲಿ 32.8 ಡಿಗ್ರಿ ಸೆಲ್ಸಿಯಸ್, ಚೆನ್ನೈನಲ್ಲಿ 32.8 ಡಿಗ್ರಿ ಸೆಲ್ಸಿಯಸ್, ಹೈದಾರಾಬಾದ್‌ನಲ್ಲಿ 38.8 ಡಿಗ್ರಿ ಸೆಲ್ಸಿಯಸ್, ಕೋಲ್ಕತ್ತಾದಲ್ಲಿ 35.4 ಡಿಗ್ರಿ ಸೆಲ್ಸಿಯಸ್, ಅಹಮದಾಬಾದ್‌ನಲ್ಲಿ 43.4 ಡಿಗ್ರಿ ಸೆಲ್ಸಿಯಸ್, ಪುಣೆಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಹಾಗೂ ದೆಹಲಿಯಲ್ಲಿ 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.
ಏಪ್ರಿಲ್ ಹೊತ್ತಿಗೆ, ದೇಶದ ಹಲವಾರು ರಾಜ್ಯದಲ್ಲಿ ತಾಪಮಾನ ತೀವ್ರ ಮಟ್ಟಕ್ಕೆ ಏರಿಕೆ ಕಂಡಿದೆ. ರಾಜಧಾನಿ ದೆಹಲಿ ಸೇರಿದಂತೆ ಇಡೀ ಉತ್ತರ ಭಾರತದಲ್ಲಿ ಬಿಸಿಲಿನ ತಾಪಕ್ಕೆ ಜನ ಪರದಾಡುವಂತಾಗಿದೆ. ಇಂದು ದೆಹಲಿಯ ಕೆಲವು ಭಾಗಗಳಲ್ಲಿ ತಾಪಮಾನ 45-46 ಡಿಗ್ರಿ ತಲುಪಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications