Infographics: ಬೆಂಗಳೂರು ಸೇರಿ 5 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಜನವರಿ 25: ಬೆಂಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Rainfall Will Occur In 5 Districts Of Karnataka On January 25 2022

ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ ಕೆಲವು ದಿನಗಳವರೆಗೆ ದೆಹಲಿ, ಪಂಜಾಬ್, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಶೀತ ಅಲೆ ಬೀಸಲಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆ ಅಥವಾ ಹಿಮಪಾತದ ಮುನ್ಸೂಚನೆ ಇದೆ. ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಲಘು ತೀವ್ರತೆಯ ಮಳೆ/ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ.

Weather And Rain Forecast: Rainfall Will Occur In 5 Districts Of Karnataka On January 25 2022

ಗುಜರಾತ್‌ನಲ್ಲಿ ಕನಿಷ್ಠ ತಾಪಮಾನ 5-7 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ ಎಂದು IMD ಹೇಳಿದೆ; ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶದ ಮೇಲೆ 3-5 ಡಿಗ್ರಿ ಸೆಲ್ಸಿಯಸ್ ಮತ್ತು ಉತ್ತರ ಪ್ರದೇಶ, ಬಿಹಾರ, ಒಡಿಶಾ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 1-2 ಡಿಗ್ರ ಸೆಲ್ಸಿಯಸ್ ಇರಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ 30 ರಿಂದ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಇತ್ತ ಉತ್ತರ ಭಾರತದಲ್ಲಿ ಹವಾಮಾನ ತದ್ವಿರುದ್ಧವಾಗಿದ್ದು, ಹಿಮಪಾತ ಮತ್ತು ಮಳೆಯಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ವರದಿಗಳು ಸಹ ಬರುತ್ತಿವೆ.

Weather And Rain Forecast: Rainfall Will Occur In 5 Districts Of Karnataka On January 25 2022

ರಾಜ್ಯದಲ್ಲಿ ಕಳೆದ ವರ್ಷ ಸುರಿದ ಅಕಾಲಿಕ ಮಳೆ ಎಲ್ಲ ಕಡೆ ನಿಂತಿದ್ದು, ಸದ್ಯ ರಾಜ್ಯದಲ್ಲಿ ಚಳಿಯ ಪ್ರಮಾಣವೂ ದಿನೇ ದಿನೇ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿದೆ. ಇದರಿಂದ ಈ ವರ್ಷ ಬೇಸಿಗೆ ಬೇಗನೇ ಆರಂಭವಾಗುವ ಸೂಚನೆಗಳು ಕಾಣುತ್ತಿದೆ.

Recommended Video

      Kohli ನಾಯಕತ್ವ ಬಿಡುವ ಹಿಂದೆ ದೊಡ್ಡ ಮಾಸ್ಟರ್ ಪ್ಲಾನ್ ಇತ್ತಾ! | Oneindia Kannada

      ಮುಂಗಾರು ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+