Infographics: ಜನವರಿ 27ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹವಾಮಾನ ಹೇಗಿದೆ?

ಬೆಂಗಳೂರು, ಜನವರಿ 27: ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣ ಹವೆ ಇರಲಿದೆ.

ಬೆಂಗಳೂರಿನಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 21 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇದೆ. ನಗರದಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17° ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32° ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16° ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31° ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21° ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31° ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21° ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Rainfall Will Occur In 5 Districts Of Karnataka On January 27 2022

ಮುಂದಿನ ಮೂರು ದಿನಗಳಲ್ಲಿ ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆ ಕಂಡುಬರುವುದಿಲ್ಲ. ಅದರ ನಂತರ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಜನವರಿ 27 ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ಪೂರ್ವ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಪ್ರಕಟಣೆ ತಿಳಿಸಿದೆ. ಅದರ ನಂತರ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ.

Weather And Rain Forecast: Rainfall Will Occur In 5 Districts Of Karnataka On January 27 2022

ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ 30 ರಿಂದ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಇತ್ತ ಉತ್ತರ ಭಾರತದಲ್ಲಿ ಹವಾಮಾನ ತದ್ವಿರುದ್ಧವಾಗಿದ್ದು, ಹಿಮಪಾತ ಮತ್ತು ಮಳೆಯಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿ ವ್ಯಾಪ್ತಿಯಲ್ಲಿ ಚಳಿ ಹೆಚ್ಚಳವಾಗುವ ನಿರೀಕ್ಷೆ ಇದೆ.

ಅಲ್ಲದೆ, ಮುಂದಿನ ಮೂರು ದಿನಗಳಲ್ಲಿ ಗುಜರಾತ್‌ನಲ್ಲಿ ಕನಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಏರಿಕೆಯಾಗಲಿದೆ ಎಂದು ಐಎಂಡಿ ಪ್ರಕಟಣೆಯಲ್ಲಿ ತಿಳಿಸಿದೆ. ಮುಂದಿನ ಎರಡರಿಂದ ಮೂರು ದಿನಗಳಲ್ಲಿ, ಪಂಜಾಬ್, ಹರಿಯಾಣ-ಚಂಡೀಗಢ, ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ವಿದರ್ಭ, ಬಿಹಾರ ಮತ್ತು ಛತ್ತೀಸ್‌ಗಢದ ಪ್ರತ್ಯೇಕ ಭಾಗಗಳಲ್ಲಿ ಶೀತ ಅಲೆ ಸಾಧ್ಯತೆಯಿದೆ. ಜನವರಿ 28 ರಿಂದ 30 ರವರೆಗೆ ಒಡಿಶಾದಲ್ಲಿ ಶೀತ ವಾತಾವರಣ ಹೆಚ್ಚಳಿದೆ.

Weather And Rain Forecast: Rainfall Will Occur In 5 Districts Of Karnataka On January 27 2022

ಮುಂದಿನ 24 ಗಂಟೆಗಳಲ್ಲಿ ಮಧ್ಯಪ್ರದೇಶದಲ್ಲಿ ತೀವ್ರ ಚಳಿ ಹೆಚ್ಚಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಹಿಮಾಲಯ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ಮತ್ತು ಪೂರ್ವ ಉತ್ತರ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂನಲ್ಲಿ ದಟ್ಟವಾದ ಮಂಜು ಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+