ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics:ರಾಜ್ಯದ ಒಂದೆರಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಜನವರಿ 18: ರಾಜ್ಯದ ಒಂದೆರಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಉತ್ತರ ಕನ್ನಡದ ಹಲವು ಭಾಗಗಳಲ್ಲಿ ಮಳೆಯಾಗಿದೆ.

ಕೊಡಗು, ಮೈಸೂರು, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ಇಂದಿನಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ತಮಿಳುನಾಡಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ, ಮಧ್ಯ, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜಿನ ಸಾಧ್ಯತೆಯಿದೆ.

Weather And Rain Forecast: Rainfall Will Occur On January 18 2022

ಬೆಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಎಚ್‌ಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Rainfall Will Occur On January 18 2022

ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಚಳಿ ಗಾಳಿ ಬೀಸಲಿದೆ. ಹಾಗೇ, ಇಂದು ಉತ್ತರ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಚೆನ್ನೈ, ತಿರುವಳ್ಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ತಿಳಿಸಿದೆ. ಚೆನ್ನೈ, ಚೆಂಗಲ್ಪಟ್ಟು, ರಾಣಿಪೇಟ್, ಕಾಂಚೀಪುರಂ, ವೆಲ್ಲೂರು, ಕಡಲೂರು, ವಿಲ್ಲುಪುರಂ, ತಿರುವರೂರ್, ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಶೀತ ಅಲೆಯ ಪರಿಸ್ಥಿತಿ ಇರಬಹುದೆಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

Weather And Rain Forecast: Rainfall Will Occur On January 18 2022

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಈ ಬಾರಿ ಭಾರೀ ಮಳೆಯಾಗಿದೆ. ಇಂದಿನಿಂದ ಜ. 21ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಶುಕ್ರವಾರದವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಶುಕ್ರವಾರ ಮತ್ತು ಶನಿವಾರದಂದು ಈ ಪ್ರದೇಶದಲ್ಲಿ ಮಿಂಚು ಮತ್ತು ಆಲಿಕಲ್ಲುಗಳೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಇಂದಿನಿಂದ ಗುರುವಾರದವರೆಗೆ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದಿನಿಂದ ಜನವರಿ 20ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ. ಇಂದು ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು, ಹಿಮಾಚಲ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸುತ್ತದೆ.

English summary
Weather and rain forecast as on January 13: Rainfall Will Occur On January18 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X