ರಾಜ್ಯದೆಲ್ಲೆಡೆ ಒಣ ಹವೆ, ಯಾವ ಊರಲ್ಲಿ ಎಷ್ಟಿದೆ ತಾಪಮಾನ?

ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ತಗ್ಗಿದೆ. ರಾಜ್ಯದ ಬಹುತೇಕ ಎಲ್ಲೆಡೆ ಬಿರು ಬಿಸಿಲಿನ ತಾಪಮಾನ ಕಾಡಲಿದೆ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿಏಪ್ರಿಲ್ 7 ರಿಂದ ಸತತವಾಗಿ ಮೂರು ದಿನ ಮಳೆಯಾಗುವ ಲಕ್ಷಣಗಳು ಕಂಡು ಬಂದಿವೆ.

ಆದರೆ, ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಎಲ್ಲೆಲ್ಲಿ ಮಳೆ ಸಾಧ್ಯತೆ?

ಎಲ್ಲೆಲ್ಲಿ ಮಳೆ ಸಾಧ್ಯತೆ?

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಶಿವಮೊಗ್ಗದಲ್ಲಿ ವಾರದಲ್ಲಿ ಒಂದೆರಡು ದಿನಗಳಲ್ಲಿ ಮಳೆ ಸುರಿಯಲಿದ್ದು, ಈ ವಾರ ಪೂರ್ತಿ ತಂಪಾದ ವಾತಾವರಣಾ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಏಪ್ರಿಲ್ 8 ರಿಂದ ಏಪ್ರಿಲ್ 10ರ ಅವಧಿಯಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಕಲಬುರಗಿಯಲ್ಲಿ 41.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದೆಲ್ಲೆಡೆ ಬಹುತೇಕ ಸರಾಸರಿ 24 ರಿಂದ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ರಾಜ್ಯದ ಹಲವೆಡೆ ಒಣಹವೆ

ರಾಜ್ಯದ ಹಲವೆಡೆ ಒಣಹವೆ

ಬೆಂಗಳೂರಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಮಾರ್ಚ್‌ನಲ್ಲಿ ನಾಲ್ಕನೇ ಬಾರಿ 35 ಪ್ಲಸ್ ಗರಿಷ್ಠ ತಾಪಮಾನ ದಾಖಲಾಗಿತ್ತು. ಏಪ್ರಿಲ್ ಮೊದಲ ವಾರದಲ್ಲೂ ಉಷ್ಣಾಂಶ ಅಧಿಕವಾಗಿದ್ದು, ಏಪ್ರಿಲ್ 7ರ ನಂತರ ಕೆಲವೆಡೆ ಮೋಡ ಕವಿದ ವಾತಾವರಣ, ಸಾಧಾರಣ ಮಳೆ ಸುರಿಯಲಿದೆ. ವಿಮಾನ ನಿಲ್ದಾಣ ಪ್ರದೇಶದಲ್ಲಿ ಬೆಳಗ್ಗೆ ವೇಳೆ ಮಾತ್ರ ಕೆಲವು ಕಡೆ ಮೋಡ ಕವಿದ ವಾತಾವರಣ ಇರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+