ಹವಾಮಾನ: ಕರ್ನಾಟಕದಲ್ಲಿ ಸುಡುವ ಬಿಸಿಲು ಎಲ್ಲಿ ಎಷ್ಟು ತಾಪಮಾನ?
ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತಗ್ಗಿದೆ. ಉತ್ತರ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆದಿದೆ. ಆಗಾಗ ಸುರಿಯುತ್ತಿದ್ದ ಅಕಾಲಿಕ ಮಳೆ ನಿರೀಕ್ಷೆಯಿಲ್ಲ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಮಾತ್ರ ಇನ್ನೊಂದು ದಿನ ಮಳೆ ಬಗ್ಗೆ ನಿರೀಕ್ಷೆಯಿದೆ. ಮಿಕ್ಕಂತೆ ರಾಜ್ಯದೆಲ್ಲೆಡೆ ಸುಡುವ ಬಿಸಿಲು ಕಾಡಲಿದೆ. ಏಪ್ರಿಲ್ 2 ರಂದು ಸೂರ್ಯೋದಯ ಬೆಳಗ್ಗೆ 6.15ಕ್ಕೆ ಆಗಲಿದೆ. ಸೂರ್ಯಾಸ್ತ ಸುಮಾರು 18.31ಕ್ಕೆ ಆಗಲಿದೆ.
ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಕೆಲವೆಡೆ ಬೆಳಗ್ಗೆ ಹೊತ್ತು ಮೋಡ ಕವಿದ ವಾತಾವರಣ ಇರಲಿದೆ ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಎಲ್ಲೆಲ್ಲಿ ಮಳೆ ಸಾಧ್ಯತೆ?
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಇನ್ನೊಂದು ದಿನ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ
ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದೆಲ್ಲೆಡೆ ಬಹುತೇಕ 22 ರಿಂದ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೆಲವೆಡೆ ತಂಪಾದ ಗಾಳಿ ಬೀಸುವ ನಿರೀಕ್ಷೆಯಿದೆ.

ರಾಜ್ಯದ ಹಲವೆಡೆ ಒಣಹವೆ
ಬೆಂಗಳೂರಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಮಾರ್ಚ್ನಲ್ಲಿ ನಾಲ್ಕನೇ ಬಾರಿ 35 ಪ್ಲಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಏಪ್ರಿಲ್ 7ರ ತನಕ ಇದೇ ರೀತಿ ಬಿಸಿಲು ಮುಂದುವರೆಯಲಿದೆ. ಬೆಳಗ್ಗೆ ವೇಳೆ ಮಾತ್ರ ಕೆಲವು ಕಡೆ ಮೋಡ ಕವಿದ ವಾತಾವರಣ ಇರಲಿದೆ.