ಹವಾಮಾನ ಮುನ್ಸೂಚನೆ ಇನ್ನೆರಡು ದಿನ ಮಳೆ, ನಂತರ ಬಿಸಿಲು

ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವೊಮ್ಮೆ ಅಕಾಲಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರಿನ ಕೆಲವಡೆ ಮಳೆಯಾಗಿದೆ.ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗಲಿದೆ.

ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಕೆಲವೆಡೆ ಬೆಳಗ್ಗೆ ಹೊತ್ತು ಮೋಡ ಕವಿದ ವಾತಾವರಣ ಇರಲಿದೆ ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಎಲ್ಲೆಲ್ಲಿ ಮಳೆ ಸಾಧ್ಯತೆ?

ಎಲ್ಲೆಲ್ಲಿ ಮಳೆ ಸಾಧ್ಯತೆ?

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 2 ರ ತನಕ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್ 1ರ ತನಕ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಎಲ್ಲಿ ಹೆಚ್ಚು ಮಳೆ:
ಕಳೆದ 24 ಗಂಟೆಗಳ ಮಳೆ ನಕ್ಷೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ. ಇದರಂತೆ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಜತ್ತೂರು ಎಂಬಲ್ಲಿ ಅತ್ಯಧಿಕ 49 ಮಿ. ಮೀ ಮಳೆಯಾಗಿದೆ.

Recommended Video

    ಭಾರಿ ಮಳೆ ಸೂಚನೆ ಕೊಟ್ಟ ಹವಾಮಾನ ಇಲಾಖೆ | Oneindia Kannada
    ರಾಜ್ಯದ ಹಲವೆಡೆ ಮಳೆ ಸೂಚನೆ

    ರಾಜ್ಯದ ಹಲವೆಡೆ ಮಳೆ ಸೂಚನೆ

    ಬೆಂಗಳೂರಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಮಾರ್ಚ್‌ನಲ್ಲಿ ಮೂರನೇ ಬಾರಿ 35 ಪ್ಲಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಏಪ್ರಿಲ್ 5ರ ತನಕ ಇದೇ ರೀತಿ ಬಿಸಿಲು ಮುಂದುವರೆಯಲಿದೆ. ಬೆಳಗ್ಗೆ ವೇಳೆ ಮಾತ್ರ ಕೆಲವು ಕಡೆ ಮೋಡ ಕವಿದ ವಾತಾವರಣ ಇರಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+