ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹವಾಮಾನ ವರದಿ: ರಾಜ್ಯದಲ್ಲಿಎಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು ಜೋರು?

|
Google Oneindia Kannada News

ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನು ಮೂರು ದಿನ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆದರೂ ಅಕಾಲಿಕ ಮಳೆ ಅಲ್ಲಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಆದರೆ, ಬೆಳಗಾವಿ, ಕಲಬುರಗಿ ಜಿಲ್ಲೆಯಲ್ಲಿ ಸಿಡಿಲು, ಗುಡುಗು ಆರ್ಭಟದ ಜೊತೆ ಜೋರಾಗಿ ಮಳೆ ಸುರಿದಿದೆ. ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರಿನ ಕೆಲವಡೆ ಮಳೆಯಾಗಿದೆ. ಉತ್ತರ ಕರ್ನಾಟಕದಲ್ಲಿ ಅಕಾಲಿಕ ಮಳೆಯಿಂದ ಮಾವು, ಬಿಳಿಜೋಳ ಬೆಳೆ ಹಿರೇಕಾಯಿ,ಗೋಧಿ, ಜೋಳ, ಸೌತೆಕಾಯಿ ಸೇರಿದಂತೆ ಹಲವು ತರಕಾರಿ ಬೆಳೆಗಳು ನಾಶವಾಗಿವೆ.

ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಕೆಲವೆಡೆ ಬೆಳಗ್ಗೆ ಹೊತ್ತು ಮೋಡ ಕವಿದ ವಾತಾವರಣ ಇರಲಿದೆ ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಎಲ್ಲೆಲ್ಲಿ ಮಳೆ ಸಾಧ್ಯತೆ?

ಎಲ್ಲೆಲ್ಲಿ ಮಳೆ ಸಾಧ್ಯತೆ?

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಮಾರ್ಚ್ 30ರ ನಂತರವೂ ಎರಡು ದಿನ ಭಾರಿ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವೆಡೆ ಮಾರ್ಚ್ 30ರ ತನಕ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಕಲಬುರಗಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಹಾಗೆಯೇ ದಾವಣಗೆರೆಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಎಲ್ಲಿ ಹೆಚ್ಚು ಮಳೆ:
ಕಳೆದ 24 ಗಂಟೆಗಳ ಮಳೆ ನಕ್ಷೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ. ಇದರಂತೆ, ಉಡುಪಿ ಜಿಲ್ಲೆಯ ಕಾರ್ಕಳದ ರೆಂಜಾಳಎಂಬಲ್ಲಿ ಅತ್ಯಧಿಕ 55 ಮಿ. ಮೀ ಮಳೆಯಾಗಿದೆ.

Recommended Video

ಎಲ್ಲೆಲ್ಲೂ GO BACK MODI ಘೋಷಣೆ! | Oneindia Kannada
ರಾಜ್ಯದ ಹಲವೆಡೆ ಮಳೆ ಸೂಚನೆ

ರಾಜ್ಯದ ಹಲವೆಡೆ ಮಳೆ ಸೂಚನೆ

ಬೆಂಗಳೂರಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಬೆಂಗಳೂರು ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನೊಷ್ಠ ಉಷ್ಣಾಂಶ, ಇನ್ನು ಕೆಐಎಎಲ್‌ನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

English summary
Weather Forecast March 29: Isolated rains and thunderstorms expected in Karnataka with dry weather in Kalyana Karnataka region says IMD report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X