ಹವಾಮಾನ ವರದಿ: ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ?

ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮಾರ್ಚ್ 25ರ ತನಕ ಮಳೆಯಾಗಲಿದೆ ಎಂದು ಹವಾಮಾನ ವರದಿ ಬಂದಿದೆ.

ಈ ವಾರದಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗಿರುವ ವರದಿಗಳ ಬೆನ್ನಲ್ಲೇ ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೊದಲೇ ತಿಳಿಸಿತ್ತು. ಬೆಂಗಳೂರಿನ ಹೊರ ವಲಯದಲ್ಲಿ ಮಳೆ ನಿರೀಕ್ಷೆಯಿದ್ದರೂ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಕಲಬುರಗಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಾವಣಗೆರೆಯಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

ಹೈದರಾಬಾದ್, ತೆಲಂಗಾಣ ಕೆಲ ಗಡಿ ಭಾಗದಲ್ಲಿ ಎರಡು ದಿನ ಮಳೆಯಾಗಲಿದ್ದು, ರಾಜ್ಯದ ಕೆಲವು ಗಡಿ ಜಿಲ್ಲೆಗಳಿಗೂ ಇದು ವಿಸ್ತರಿಸುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲ್ಯಾಣ ಕರ್ನಾಟಕದ ಕಲಬುರಗಿ, ರಾಯಚೂರು ಮುಂತಾದೆಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಂಭವವಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಮುಂದಿನ 24 ಗಂಟೆಯಲ್ಲಿ ಮಳೆಬರುವ ಸಾಧ್ಯತೆ ಕಡಿಮೆ ಇದೆ. ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ವಿವಿಧ ಪಟ್ಟಣಗಳಲ್ಲಿ ತಾಪಮಾನ ವಿವರ ಇಲ್ಲಿದೆ:

Weather Forecast: dry weather in many parts of Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+