Inforgraphics: ರಾಜ್ಯದೆಲ್ಲೆಡೆ ತೀವ್ರ ಬಿಸಿಗಾಳಿ, ಎಲ್ಲೆಡೆ ಒಣಹವೆ

ಬೆಂಗಳೂರು, ಫೆಬ್ರವರಿ 23: ರಾಜ್ಯದೆಲ್ಲೆಡೆ ಒಣಹವೆ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 3 ದಿನಗಳಲ್ಲಿ ವಾಯುವ್ಯ, ಮಧ್ಯ ಮತ್ತು ಈಶಾನ್ಯ ಭಾರತದ ಬಹುತೇಕ ಭಾಗಗಳಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಹೆಚ್ಚಿನ ಸಂಭವನೀಯತೆ ಇದೆ. ಕರ್ನಾಟಕದ ಕರಾವಳಿ ಭಾಗದಲ್ಲೂ ಬಿಸಿಲು ಹೆಚ್ಚಾಗಲಿದೆ.

ಬೇಸಿಗೆ ಋತು ಆರಂಭದಲ್ಲೇ ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ ಮೀರಿದೆ. ಮಾರ್ಚ್‌ನಿಂದ ಮೇ ತಿಂಗಳವರೆಗೆ ಬೇಸಿಗೆ ಋತು ಇರುತ್ತದೆ. ಆದರೆ ಆರಂಭದ ಎರಡು ವಾರದಲ್ಲೇ ಜನರಿಗೆ ಸುಡುವ ಬಿಸಿಲು ಕಾಡುತ್ತಿದೆ. ಆರಂಭದಲ್ಲೇ ತಾಪ ಹೆಚ್ಚಾಗಿರುವುದರಿಂದ ಈ ಬೇಸಿಗೆಯ ಕಾವು ಮತ್ತಷ್ಟು ಏರಲಿದೆ.

ದಕ್ಷಿಣ ಭಾರತದಲ್ಲಿ ಅನೇಕ ಸ್ಥಳಗಳಲ್ಲಿ ಸರಾಸರಿ 35 ° C ಮೀರಿದೆ. ಸೌರಾಷ್ಟ್ರ-ಕಚ್, ಕೊಂಕಣ ಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಕರ್ನಾಟಕ, ನೈಋತ್ಯ, ರಾಜಸ್ಥಾನ ಮತ್ತು ಗುಜರಾತ್ ಪ್ರದೇಶಗಳು ಸಹ ಬಿಸಿಗಾಳಿ ಪರಿಸ್ಥಿತಿಗಳಿಗೆ ಸಾಕ್ಷಿಯಾಗಲಿವೆ.

Weather Forecast: Dry Weather Prevailed Over Karnataka from March 14

ಹವಾಮಾನ ಇಲಾಖೆಯು ಮಾರ್ಚ್ 16 ರವರೆಗೆ ಪಾಲ್ಘರ್, ಥಾಣೆ, ಮುಂಬೈ, ರಾಯಗಡ್, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆಯನ್ನು ನೀಡಿದೆ. ಗುಜರಾತ್ ರಾಜ್ಯದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಎದುರಿಸಬೇಕಾಗುತ್ತದೆ.

ದೇಶಾದ್ಯಂತ ಹೆಚ್ಚುತ್ತಿರುವ ತಾಪಮಾನ ಇದೀಗ ಆತಂಕಕ್ಕೆ ಕಾರಣವಾಗಿದೆ. ಅನೇಕ ರಾಜ್ಯಗಳು ಹಠಾತ್ ಶಾಖದ ಅಲೆಗಳಿಗೆ ಸಾಕ್ಷಿಯಾಗಲು ಪ್ರಾರಂಭಿಸಿವೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಐದು ದಿನಗಳಲ್ಲಿ ತಾಪಮಾನದಲ್ಲಿ ಗಮನಾರ್ಹ ಏರಿಕೆ ಕಂಡುಬರಲಿದೆ.

Weather Forecast: Dry Weather Prevailed Over Karnataka from March 14

ಕರ್ನಾಟಕದಲ್ಲೂ ಒಣಹವೆ ಮುಂದುವರಿಕೆ:
ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹುಬ್ಬಳ್ಳಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 3ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇದೆ.

ಶಿವಮೊಗ್ಗ, ಕೊಪ್ಪಳ, ಕಲಬುರಗಿ, ಕಾರವಾರ, ಮಂಡ್ಯ, ದಾವಣಗೆರೆಯಲ್ಲಿ ತಲಾ 35 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿದೆ. ಈ ಸಂದರ್ಭದಲ್ಲೇ ಗದಗ, ವಿಜಯಪುರ, ಹಾವೇರಿ, ಚಿತ್ರದುರ್ಗ, ಮೈಸೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಲಿದೆ. ಬೆಂಗಳೂರು ನಗರ, ಧಾರವಾಡ, ವಿಜಯಪುರ, ಬೀದರ್, ಮಂಗಳೂರು ವಿಮಾನ ನಿಲ್ದಾಣದಲ್ಲಿ 33 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಇನ್ನು ಹಾಸನ, ಚಿಂತಾಮಣಿ, ಬೆಳಗಾವಿ, ಹೊನ್ನಾವರದಲ್ಲಿ ತಲಾ 32 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ.

Weather Forecast: Dry Weather Prevailed Over Karnataka from March 14

ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 32-33 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕವಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚಿನ ಉಷ್ಣಾಂಶ ರಾಯಚೂರಿನಲ್ಲಿ ಇದ್ದು, ಜಿಲ್ಲೆಯಲ್ಲಿ ಸರಾಸರಿ ತಾಪಮಾನ 37.0 ರಿಂದ 39 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ.

Recommended Video

      RCB ಕಪ್ ಗೆಲ್ಲಲು ಮುಳುವಾಗಿರುವ 3 ತಂಡಗಳು ಇವೇ ನೋಡಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+