Inforgraphics: ಮಾ.19ರಂದು ರಾಜ್ಯದ ಹಲವೆಡೆ ಮಳೆ; ಉಳಿದೆಡೆ ಹೇಗಿದೆ ವಾತಾವರಣ

ಬೆಂಗಳೂರು, ಮಾರ್ಚ್ 19: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳವರೆಗೂ ಹಲವೆಡೆ ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ಬೀಳುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ದಕ್ಷಿಣ ಒಳನಾಡು ಪ್ರದೇಶವಾಗಿರುವ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರೆಡು ಕಡೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆಗಳಿವೆ.

ಬೆಂಗಳೂರು ನಗರ ವಲಯದಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವಾರಣವಿರಲಿದ್ದು ಅಲ್ಲಲ್ಲಿ ಮಳೆ ಆಗುವ ನಿರೀಕ್ಷೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮೋಡ ಮುಸುಕುವ ವಾತಾವರಣ ನಿರ್ಮಾಣವಾಗಲಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಆಗಿದೆ.

Weather Forecast: Dry Weather Prevailed Over Karnataka from March 19

ರಾಜ್ಯದಲ್ಲಿ ಅತಿಹೆಚ್ಚಿನ ಉಷ್ಣಾಂಶವು ರಾಯಚೂರು ಜಿಲ್ಲೆಯಲ್ಲಿ ದಾಖಲಾಗಿದ್ದು, ಗರಿಷ್ಠ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್ ಆಗಿದೆ. ಅದೇ ರೀತಿ ಕನಿಷ್ಠ ಉಷ್ಣಾಂಶವು ರಾಜ್ಯದ ಸಮತಟ್ಟು ಪ್ರದೇಶದಲ್ಲಿರುವ ಜಿಲ್ಲೆ ದಾವಣಗೆರೆಯಲ್ಲಿ ದಾಖಲಾಗಿದೆ. ಈ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶವು 16.3 ಡಿಗ್ರಿ ಸೆಲ್ಸಿಯಸ್ ಆಗಿದೆ.

ದಕ್ಷಿಣ ಭಾರತದ ಅನೇಕ ಸ್ಥಳಗಳ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್:

ದಕ್ಷಿಣ ಭಾರತದ ಅನೇಕ ಸ್ಥಳಗಳಲ್ಲಿ ಸರಾಸರಿ 35 ° C ಮೀರಿದೆ. ಸೌರಾಷ್ಟ್ರ-ಕಚ್, ಕೊಂಕಣ ಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಕರ್ನಾಟಕ, ನೈಋತ್ಯ, ರಾಜಸ್ಥಾನ ಮತ್ತು ಗುಜರಾತ್ ಪ್ರದೇಶಗಳು ಸಹ ಬಿಸಿಗಾಳಿ ಪರಿಸ್ಥಿತಿಗಳಿಗೆ ಸಾಕ್ಷಿಯಾಗಲಿವೆ.ಹವಾಮಾನ ಇಲಾಖೆಯು ಮಾರ್ಚ್ 19 ರವರೆಗೆ ಪಾಲ್ಘರ್, ಥಾಣೆ, ಮುಂಬೈ, ರಾಯಗಡ್, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆಯನ್ನು ನೀಡಿದೆ. ಗುಜರಾತ್ ರಾಜ್ಯದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಎದುರಿಸಬೇಕಾಗುತ್ತದೆ.

Weather Forecast: Dry Weather Prevailed Over Karnataka from March 19

ಕರ್ನಾಟಕದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ:

ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 12 ಕಿ.ಮೀ ಆಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಾಗಿದೆ. ಗಾಳಿಯ ವೇಗ ಗಂಟೆಗೆ 20 ಕಿ.ಮೀ ಆಗಿದೆ.

ಬಾಗಲಕೋಟೆ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 52 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಳ್ಳಾರಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶಿವಮೊಗ್ಗದಲ್ಲಿ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 34 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇದೆ.

Weather Forecast: Dry Weather Prevailed Over Karnataka from March 19

ಕೊಪ್ಪಳ, ಕಲಬುರಗಿ, ಕಾರವಾರ, ಮಂಡ್ಯ, ದಾವಣಗೆರೆಯಲ್ಲಿ ತಲಾ 34 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿದೆ. ಈ ಸಂದರ್ಭದಲ್ಲೇ ಗದಗ, ವಿಜಯಪುರ, ಹಾವೇರಿ, ಚಿತ್ರದುರ್ಗ, ಮೈಸೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಲಿದೆ. ಬೆಂಗಳೂರು ನಗರ, ಧಾರವಾಡ, ವಿಜಯಪುರ, ಬೀದರ್ 33 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಇನ್ನು ಹಾಸನ, ಚಿಂತಾಮಣಿ, ಬೆಳಗಾವಿ, ಹೊನ್ನಾವರದಲ್ಲಿ ತಲಾ 31 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 32-33 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+