Inforgraphics: ಮಾ.22ರಂದು ರಾಜ್ಯ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ

ಬೆಂಗಳೂರು, ಮಾರ್ಚ್ 22: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿದ ಹಲವೆಡೆ ಸಾಧಾರಣ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಸೇರಿದಂತೆ ಒಂದೆರೆಡು ಕಡೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Weather Forecast: Dry Weather Prevailed Over Karnataka From March 22

ಮಾರ್ಚ್ 24ರವರೆಗೂ ಮಳೆ ಮುಂದುವರಿಕೆ:

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಹಲವೆಡೆ ಗುಡುಗು ಸಹಿತ ಮಳೆ ಆಗಿದೆ. ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather Forecast: Dry Weather Prevailed Over Karnataka From March 22

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಎಷ್ಟಿದೆ?

ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 39.60 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ಆಗಿದೆ. ಅತಿಹೆಚ್ಚಿನ ಉಷ್ಣಾಂಶವು ಕಲಬುರಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಗರಿಷ್ಠ ಉಷ್ಣಾಂಶ 39.60 ಡಿಗ್ರಿ ಸೆಲ್ಸಿಯಸ್ ಆಗಿದೆ. ಅದೇ ರೀತಿ ಕನಿಷ್ಠ ಉಷ್ಣಾಂಶವು ರಾಜ್ಯದ ಸಮತಟ್ಟು ಪ್ರದೇಶದಲ್ಲಿರುವ ಜಿಲ್ಲೆ ದಾವಣಗೆರೆಯಲ್ಲಿ ದಾಖಲಾಗಿದೆ. ಈ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶವು 15.00 ಡಿಗ್ರಿ ಸೆಲ್ಸಿಯಸ್ ಆಗಿದೆ.

Weather Forecast: Dry Weather Prevailed Over Karnataka From March 22

ರಾಜ್ಯದ ಪ್ರಮುಖ ನಗರಗಳಲ್ಲಿ ತಾಪಮಾನ:

ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 20ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 13 ಕಿ.ಮೀ ಆಗಿದೆ. ಬಾಗಲಕೋಟೆ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 34ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 74ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 54ರಷ್ಟು ತೇವಾಂಶ, ಇದೆ. ಮೈಸೂರು 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 64ರಷ್ಟು ತೇವಾಂಶ, ಬಳ್ಳಾರಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 42ರಷ್ಟು ತೇವಾಂಶ ದಾಖಲಾಗಿದೆ.

Weather Forecast: Dry Weather Prevailed Over Karnataka From March 22

ರಾಯಚೂರು 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 42ರಷ್ಟು ತೇವಾಂಶ, ಚಿತ್ರದುರ್ಗ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 80ರಷ್ಟು ತೇವಾಂಶ, ಕಲಬುರಗಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 38ರಷ್ಟು ತೇವಾಂಶ, ಚಿಕ್ಕಮಗಳೂರು 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 57ರಷ್ಟು ತೇವಾಂಶ ದಾಖಲಾಗಿದೆ.

Recommended Video

      ಜನಸಾಮಾನ್ಯರಿಗೆ ಡಬಲ್ ಶಾಕ್:ಪೆಟ್ರೋಲ್,ಡೀಸೆಲ್,ಗ್ಯಾಸ್ ಸಿಲಿಂಡರ್ ರೇಟ್ ಏರಿಕೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+