Get Updates
Get notified of breaking news, exclusive insights, and must-see stories!

Inforgraphics: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು, ಮಾರ್ಚ್ 26: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿದ ಕೆಲವೆಡೆ ಮಳೆಯಾಗಿದ್ದು, ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಚಿಕ್ಕಮಗಳೂರಿನ ಬಾಳೆಹೊನ್ನೂರು, ಹಾವೇರಿಯ ಶಿಗ್ಗಾಂವ್, ಹಾಸನದ ಬೇಲೂರು, ಧಾರವಾಡದ ಅಣ್ಣಿಗೆರೆ ಮತ್ತು ರಾಮನಗರದ ಮಾಗಡಿಯಲ್ಲಿ ಮಳೆಯಾಗಲಿದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Weather Forecast: Dry Weather Prevailed Over Karnataka from March 26

ಮಾರ್ಚ್ 24ರವರೆಗೂ ಮಳೆ ಮುಂದುವರಿಕೆ:

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಹಲವೆಡೆ ಗುಡುಗು ಸಹಿತ ಮಳೆ ಆಗಿದೆ. ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 22 ಡಿಗ್ರಿ ತೇವಾಂಶ ದಾಖಲಾಗಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಎಷ್ಟಿದೆ?

ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 40.4 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠಿ ಉಷ್ಣಾಂಶ 18.40 ಡಿಗ್ರಿ ಸೆಲ್ಸಿಯಸ್ ಆಗಿದೆ. ಅತಿಹೆಚ್ಚಿನ ಉಷ್ಣಾಂಶವು ರಾಯಚೂರು ಜಿಲ್ಲೆಯಲ್ಲಿ ದಾಖಲಾಗಿದ್ದು, ಗರಿಷ್ಠ ಉಷ್ಣಾಂಶ 40.4 ಡಿಗ್ರಿ ಸೆಲ್ಸಿಯಸ್ ಆಗಿದೆ. ಅದೇ ರೀತಿ ಕನಿಷ್ಠ ಉಷ್ಣಾಂಶವು ರಾಜ್ಯದ ಸಮತಟ್ಟು ಪ್ರದೇಶದಲ್ಲಿರುವ ಜಿಲ್ಲೆ ಬಾಗಲಕೋಟೆಯಲ್ಲಿ ದಾಖಲಾಗಿದೆ. ಈ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶವು 18.400 ಡಿಗ್ರಿ ಸೆಲ್ಸಿಯಸ್ ಆಗಿದೆ.

Weather Forecast: Dry Weather Prevailed Over Karnataka from March 26

ರಾಜ್ಯದ ಪ್ರಮುಖ ನಗರಗಳಲ್ಲಿ ತಾಪಮಾನ:

ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 38ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 21 ಕಿ.ಮೀ ಆಗಿದೆ. ಬಾಗಲಕೋಟೆ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 51ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 33ರಷ್ಟು ತೇವಾಂಶ, ಇದೆ. ಮೈಸೂರು 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 39ರಷ್ಟು ತೇವಾಂಶ, ಬಳ್ಳಾರಿಯಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25ರಷ್ಟು ತೇವಾಂಶ ದಾಖಲಾಗಿದೆ.

Weather Forecast: Dry Weather Prevailed Over Karnataka from March 26

ರಾಯಚೂರು 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27ರಷ್ಟು ತೇವಾಂಶ, ಚಿತ್ರದುರ್ಗ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 37ರಷ್ಟು ತೇವಾಂಶ, ಕಲಬುರಗಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27ರಷ್ಟು ತೇವಾಂಶ, ಚಿಕ್ಕಮಗಳೂರು 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 31ರಷ್ಟು ತೇವಾಂಶ ದಾಖಲಾಗಿದೆ.

Recommended Video

      'ಅಪ್ಪು ' ಸಾಧನೆ ಅಮರ | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+