ಏಪ್ರಿಲ್ 9: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ತಾಪಮಾನ ಎಷ್ಟು?

ಕರ್ನಾಟಕದಲ್ಲಿ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳು ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿಯುವ ಬಗ್ಗೆ ಈಗಾಗಲೇ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಏಪ್ರಿಲ್ 9ರಂದು ರಾಜ್ಯದ ಹಲವೆಡೆ ಹವಾಮಾನ ಬದಲಾಗುತ್ತಿದ್ದು, ಹಲವೆಡೆ ಮಳೆ ನಿರೀಕ್ಷೆ ಹುಟ್ಟುಕೊಂಡಿದೆ.

ಏಪ್ರಿಲ್ 8 ರಿಂದ 12ರ ತನಕ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸತತವಾಗಿ ಮಳೆಯಾಗುವ ಲಕ್ಷಣಗಳಿವೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 37.5 ಮಿ.ಮೀ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಲ್ಲಾಪುರ ಎಂಬಲ್ಲಿ ದಾಖಲಾಗಿದೆ.

ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಎಲ್ಲೆಲ್ಲಿ ಮಳೆ ಸಾಧ್ಯತೆ?

ಎಲ್ಲೆಲ್ಲಿ ಮಳೆ ಸಾಧ್ಯತೆ?

ಮಳೆ ಮುನ್ಸೂಚನೆ: ಮಳೆ ಮುನ್ಸೂಚನೆ: ರಾಜ್ಯದ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಹಾಸನ, ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಧಾರವಾಡ ಮತ್ತ ಬಾಗಲಕೋಟೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಏಪ್ರಿಲ್ 13ರಂದು ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದೆಲ್ಲೆಡೆ ಬಹುತೇಕ ಸರಾಸರಿ 24 ರಿಂದ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ದಕ್ಷಿಣ ಒಳನಾಡಿನ ಕೋಲಾರ, ಬಳ್ಳಾರಿ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ರಾಜ್ಯದ ಹಲವೆಡೆ ಒಣಹವೆ

ರಾಜ್ಯದ ಹಲವೆಡೆ ಒಣಹವೆ

ಬೆಂಗಳೂರಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಮಾರ್ಚ್‌ ತಿಂಗಳ ಕೊನೆಯಲ್ಲಿ ಸತತವಾಗಿ ನಾಲ್ಕನೇ ಬಾರಿ 35 ಪ್ಲಸ್ ಗರಿಷ್ಠ ತಾಪಮಾನ ದಾಖಲಾಗಿತ್ತು. ಏಪ್ರಿಲ್ ಮೊದಲ ವಾರದಲ್ಲೂ ಉಷ್ಣಾಂಶ ಅಧಿಕವಾಗಿದೆ, ಕೆಐಎಎಲ್‌ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ವಿಮಾನ ನಿಲ್ದಾಣ ಪ್ರದೇಶದಲ್ಲಿ ಬೆಳಗ್ಗೆ ವೇಳೆ ಮಾತ್ರ ಕೆಲವು ಕಡೆ ಮೋಡ ಕವಿದ ವಾತಾವರಣ ಇರಲಿದೆ.

Recommended Video

      #Covid19Updates: ಕೊರೋನಾ ನಾಗಲೋಟ.. 7955 ಹೊಸ ಕೋವಿಡ್ ಸ್ಫೋಟ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+