ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹವಾಮಾನ ವರದಿ: ರಾಜ್ಯದ ಹಲವೆಡೆ ಮುಂದುವರಿದ ಒಣ ಹವೆ

|
Google Oneindia Kannada News

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಈ ವಾರದಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗಿರುವ ವರದಿಗಳ ಬೆನ್ನಲ್ಲೇ ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನ ಹೊರ ವಲಯದಲ್ಲಿ ಮಳೆ ನಿರೀಕ್ಷೆಯಿದ್ದರೂ ನಗರ ಪ್ರದೇಶದಲ್ಲಿ ಬಿಸಿಲು ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ಮುಂದುವರೆಯಲಿದೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮೇಲ್ಮೈ ಸುಳಿಗಾಳಿ ತೀವ್ರತೆಯಿಂದ ಹೈದರಾಬಾದ್, ತೆಲಂಗಾಣ ಕೆಲ ಗಡಿ ಭಾಗದಲ್ಲಿ ಎರಡು ದಿನ ಮಳೆಯಾಗಲಿದ್ದು, ರಾಜ್ಯದ ಕೆಲವು ಗಡಿ ಜಿಲ್ಲೆಗಳಿಗೂ ಇದು ವಿಸ್ತರಿಸುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲ್ಯಾಣ ಕರ್ನಾಟಕದ ಕಲಬುರಗಿ, ರಾಯಚೂರು ಮುಂತಾದೆಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಂಭವವಿದೆ.

ಬೆಂಗಳೂರಿನಲ್ಲಿ ನಿರ್ಮಲವಾದ ಆಕಾಶ ಇರಲಿದ್ದು, ಮುಂಜಾನೆ ಕೆಲವೆಡೆ ಮಂಜು ಕವಿದ ವಾತವರಣ ಇರಲಿದೆ. ಗರಿಷ್ಠ 34ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸರಾಸರಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ವಿವಿಧ ಪಟ್ಟಣಗಳಲ್ಲಿ ತಾಪಮಾನ ವಿವರ ಇಲ್ಲಿದೆ:

Weather Forecast: Isolated rains and dry weather Karnataka

Weather Forecast: Isolated rains and dry weather Karnataka

Weather Forecast: Isolated rains and dry weather Karnataka
English summary
Weather Forecast March 21: Isolated rains and thunderstorms expected in Karnataka says IMD report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X