ಹವಾಮಾನ ವರದಿ: ರಾಜ್ಯದ ಯಾವ ಜಿಲ್ಲೆಯಲ್ಲಿ ಬಿಸಿಲು, ಎಲ್ಲಿ ಮಳೆ?

ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನು ಐದು ದಿನ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆದರೂ ಅಕಾಲಿಕ ಮಳೆಯಿಂದ ರೈತರ ಬೆಳೆ ನಾಶವಾಗುತ್ತಿದೆ.

ಆದರೆ, ಬೆಳಗಾವಿ, ಕಲಬುರಗಿ ಜಿಲ್ಲೆಯಲ್ಲಿ ಹಲವೆಡೆ ಕಳೆದೆರಡು ದಿನಗಳಿಂದ ಸಿಡಿಲು, ಗುಡುಗು ಆರ್ಭಟದ ಜೊತೆ ಜೋರಾಗಿ ಮಳೆ ಸುರಿದಿದೆ. ಇದರಿಂದ ಮಾವು, ಬಿಳಿಜೋಳ ಬೆಳೆ ನಾಶವಾಗಿವೆ. ಕಲಬುರಗಿ ಜಿಲ್ಲೆಯಲ್ಲಿ ಗಾಳಿ ಮಳೆಯಿಂದಾಗಿ ಟೊಮ್ಯಾಟೋ, ಹಿರೇಕಾಯಿ,ಗೋಧಿ, ಜೋಳ, ಸೌತೆಕಾಯಿ ಸೇರಿದಂತೆ ಹಲವು ತರಕಾರಿ ಬೆಳೆಗಳು ನಾಶವಾಗಿವೆ.

ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಎಲ್ಲೆಲ್ಲಿ ಮಳೆ ಸಾಧ್ಯತೆ?

ಎಲ್ಲೆಲ್ಲಿ ಮಳೆ ಸಾಧ್ಯತೆ?

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಮಾರ್ಚ್ 26ರಿಂದ ಮಾರ್ಚ್ 30ರವರೆಗೆ ಭಾರಿ ಮಳೆ ನಿರೀಕ್ಷಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಕಲಬುರಗಿಯಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಹಾಗೆಯೇ ದಾವಣಗೆರೆಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಎಲ್ಲಿ ಹೆಚ್ಚು ಮಳೆ:
ಕಳೆದ 24 ಗಂಟೆಗಳ ಮಳೆ ನಕ್ಷೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ. ಇದರಂತೆ,ಬಳ್ಳಾರಿ ಜಿಲ್ಲೆಯ ಸಿರಗುಪ್ಪಾದ ಎಚ್ ಹೊಸಹಳ್ಳಿ ಎಂಬಲ್ಲಿ ಅತ್ಯಧಿಕ 14 ಮಿ. ಮೀ ಮಳೆಯಾಗಿದೆ.

Recommended Video

    DK ಶಿವಕುಮಾರ್ ಹೆಸರು ಹೇಳಿದ ಸಿಡಿ ಲೇಡಿ | Oneindia Kannada
    ರಾಜ್ಯದ ಹಲವೆಡೆ ಮಳೆ ಸೂಚನೆ

    ರಾಜ್ಯದ ಹಲವೆಡೆ ಮಳೆ ಸೂಚನೆ

    ಬೆಂಗಳೂರಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಬೆಂಗಳೂರು ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನೊಷ್ಠ ಉಷ್ಣಾಂಶ, ಇನ್ನು ಕೆಐಎಎಲ್‌ನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+