ಬೆಂಗಳೂರಲ್ಲಿ ಈ ವಾರ ಮಳೆ ಬೀಳುತ್ತೆ, ಕಲಬುರಗಿಯಲ್ಲಿ ನೆತ್ತಿ ಸುಡುತ್ತೆ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಝಳ ಈಗಾಗಲೇ ಹೆಚ್ಚಾಗುತ್ತಿದೆ. ಬೆಂಗಳೂರಿನ ಈ ವಾರದಲ್ಲಿ ಎರಡು ದಿನ ಮಳೆ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಮಳೆ ಪ್ರಮಾಣ ತಗ್ಗಿದೆ. ಎರಡು ದಿನಗಳ ನಂತರ ತಾಪಮಾನ ಏರಿಕೆಯಾಗಲಿದೆ. ರಾಜ್ಯದೆಲ್ಲೆಡೆ ಮೇ ಅಂತ್ಯದವರೆಗೂ ಒಣ ಹವೆ, ಬಿಸಿಲಿನ ಝಳ ಮುಂದುವರೆಯುತ್ತದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Recommended Video

      ಭಾರಿ ಮಳೆ ಸೂಚನೆ ಕೊಟ್ಟ ಹವಾಮಾನ ಇಲಾಖೆ | Rain Forcast

      ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ, ಕಲ್ಯಾಣ ಕರ್ನಾಟಕ ಭಾಗದಲ್ಲಿಎಂದಿನಂತೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

      ಬೆಂಗಳೂರಿನ ಹವಾಮಾನ ಈ ವಾರ:
      ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಬಿಸಿಲು ಜೋರಾಗಿರಲಿದೆ. ಮಾರ್ಚ್ 20 ರಿಂದ 22ರ ಅವಧಿಯಲ್ಲಿ ಬೆಂಗಳೂರು ನಗರದಲ್ಲಿಒಂದೆರಡು ಬಾರಿ ಮಳೆಯಾಗಲಿದೆ. ಮಾರ್ಚ್ 21ರಂದು ಸ್ವಲ್ಪ ಜೋರಾಗಿ ಮಳೆ ಸುರಿಯಲಿದೆ. ಗರಿಷ್ಠ 34ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸರಾಸರಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

      ರಾಜ್ಯದ ಗರಿಷ್ಠ ಕನಿಷ್ಠ ಉಷ್ಣಾಂಶ:
      ಮಧ್ಯ ಕರ್ನಾಟಕ ಭಾಗದಲ್ಲೂ ಒಣ ಹವೆ ಇರಲಿದೆ. ಆದರೆ, ಮಾರ್ಚ್ 16ರಂದು ದಾವಣಗೆರೆಯಲ್ಲಿ ಕನಿಷ್ಠ 14.3 ಡಿಗ್ರಿ ಸೆಲ್ಸಿಯಸ್ ತಲುಪಿತ್ತು. ಕಲಬುರಗಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

      ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗದ ಹೊಸನಗರದ ಖೈರಗುಂದ ಎಂಬಲ್ಲಿ ಅತ್ಯಧಿಕ 19ಮಿಮೀ ಮಳೆ ದಾಖಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ನಿಯಂತ್ರಣ ಸಂಸ್ಥೆ ವರದಿ ಮಾಡಿದೆ.

      ಕರ್ನಾಟಕದ ವಿವಿಧ ಪಟ್ಟಣಗಳಲ್ಲಿ ತಾಪಮಾನ ವಿವರ ಇಲ್ಲಿದೆ:(ವಿನ್ಯಾಸ: ಭರತ್ ಎಚ್.ಸಿ)

      Weather Forecast March 17: Rain expected in Bengaluru this week, Mercury on rise North Karnataka
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+