ಕರ್ನಾಟಕ ಹವಾಮಾನ ವರದಿ: ಎಲ್ಲಿ ಮಳೆ, ಎಲ್ಲಿ ಬಿಸಿಲು, ಸಂಪೂರ್ಣ ವರದಿ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದೆ, ಕರಾವಳಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರಿನಲ್ಲಿ ಒಣಹವೆ ಮುಂದುವರೆದಿದೆ.
ಬೆಂಗಳೂರಲ್ಲಿ ಶುಭ್ರ ಆಕಾಶವಿದೆ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಆದರೆ ಮಾರ್ಚ್ 21 ರಂದು ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.
ಹಾಗೆಯೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆ ನಂತರ ತಾಪಮಾನ ಎಂದಿನಂತೆ ಏರಲಿದೆ ಎಂದು ತಿಳಿದುಬಂದಿದೆ. (ವಿನ್ಯಾಸ ಭರತ್ ಎಚ್.ಸಿ)












Click it and Unblock the Notifications