ಹವಾಮಾನ ವರದಿ; ರಾಜ್ಯದ ಎಲ್ಲೆಲ್ಲಿ ಬಿಸಿಲು, ಮಳೆಯಿದೆ?
ಬೆಂಗಳೂರು, ಮಾರ್ಚ್ 27: ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಶನಿವಾರ ಬೆಂಗಳೂರು ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಇರುವುದಾಗಿ ಇಲಾಖೆ ತಿಳಿಸಿದೆ.
ಬೆಳಗಾವಿ, ಕಲಬುರಗಿ ಜಿಲ್ಲೆಯ ಹಲವೆಡೆ ಕಳೆದೆರಡು ದಿನಗಳಿಂದ ಸಿಡಿಲು, ಗುಡುಗು ಆರ್ಭಟದ ಜೊತೆ ಜೋರಾಗಿ ಮಳೆ ಸುರಿದಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿಯೂ ಸಾಧಾರಣ ಮಳೆಯಾಗುವ ಸೂಚನೆ ದೊರೆತಿದೆ. ಮುಂದೆ ಓದಿ...

ಎಲ್ಲೆಲ್ಲಿ ಎಷ್ಟು ತಾಪಮಾನ?
ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ 37 ಡಿಗ್ರಿ ಸೆಲ್ಸಿಯಸ್, ಮಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗದಲ್ಲಿ 39 ಡಿಗ್ರಿ ಸೆಲ್ಸಿಯಸ್, ಮೈಸೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ 37 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗದಲ್ಲಿ 38 ಡಿಗ್ರಿ ಸೆಲ್ಸಿಯಸ್, ಕಲಬುರಗಿಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಹಾಗೂ ಚಿಕ್ಕಮಗಳೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ
ಶಿವಮೊಗ್ಗದಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹಾಗೆಯೇ ದಾವಣಗೆರೆಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರು, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿಯಲ್ಲಿಯೂ ಬಿಸಿಲು ಹೆಚ್ಚಾಗುವ ಸೂಚನೆ ದೊರೆತಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ ಸೂಚನೆ
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಮಾರ್ಚ್ 26ರಿಂದ ಮಾರ್ಚ್ 30ರವರೆಗೆ ಭಾರಿ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಳೆ
ಕಳೆದ 24 ಗಂಟೆಗಳ ಮಳೆ ನಕ್ಷೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ. ಇದರಂತೆ, ಬಳ್ಳಾರಿ ಜಿಲ್ಲೆಯ ಸಿರಗುಪ್ಪಾದ ಎಚ್ ಹೊಸಹಳ್ಳಿ ಎಂಬಲ್ಲಿ ಅತ್ಯಧಿಕ 14 ಮಿ. ಮೀ ಮಳೆಯಾಗಿದೆ. ಗುರುವಾರ ಹಾಗೂ ಶುಕ್ರವಾರ ಮಳೆಯಾಗಿದ್ದಾಗಿ ತಿಳಿಸಿದೆ.












Click it and Unblock the Notifications