ಏಪ್ರಿಲ್ 17: ರಾಜ್ಯದಲ್ಲೆಡೆ ತಗ್ಗಿದ ಮಳೆ ಪ್ರಮಾಣ, ಯೆಲ್ಲೋ ಅಲರ್ಟ್ ಎಲ್ಲಿ?

ಕರ್ನಾಟಕದ ವಿವಿಧೆಡೆ ಏಪ್ರಿಲ್ 17ರಿಂದ ಮಳೆ ಪ್ರಮಾಣ ತಗ್ಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ವಾತಾವರಣ ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ಮುಂದುವರೆಯಲಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದರೂ ಕೆಲವೆಡೆ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ರಾಜ್ಯದ ಹಲವೆಡೆ ಕಳೆದ ವಾರ ಪೂರ್ವ ಮುಂಗಾರು ಮಾರುತಗಳ ದೆಸೆಯಿಂದ ಹಲವೆಡೆ ಮಳೆಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸುರಿದಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಮಳೆ ಮುಂದುವರೆಯುವ ಲಕ್ಷಣಗಳಿವೆ, ಯೆಲ್ಲೂ ಅಲರ್ಟ್ ಮುಂದುವರೆಸಲಾಗಿದೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 71ಮಿ.ಮೀ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಮುದಿಗೆರೆಯಲ್ಲಿ ದಾಖಲಾಗಿದೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬೆಂಗಳೂರಿನ ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಒಂದೆರಡು ಕಡೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಬಹುದು, ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಎಲ್ಲೆಲ್ಲಿ ಮಳೆ ಸಾಧ್ಯತೆ?, ಯೆಲ್ಲೂ ಅಲರ್ಟ್

ಎಲ್ಲೆಲ್ಲಿ ಮಳೆ ಸಾಧ್ಯತೆ?, ಯೆಲ್ಲೂ ಅಲರ್ಟ್

ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆ ಮತ್ತ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆ. ರಾಜ್ಯದಾದ್ಯಂತ ಅಲ್ಲಲ್ಲಿ ಬಲವಾದ ಮೈಲ್ಮೈಸುಳಿಗಾಳಿ ಬೀಸುತ್ತಿದ್ದು ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಕಲಬುರಗಿಯಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದೆಲ್ಲೆಡೆ ಬಹುತೇಕ ಸರಾಸರಿ 24 ರಿಂದ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ದಕ್ಷಿಣ ಒಳನಾಡಿನ ಕೋಲಾರ, ಬಳ್ಳಾರಿ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

Recommended Video

    ಹೆಚ್ಚುತ್ತಿರುವ ಕೋವಿಡ್‌ ಮೃತರ ಸಂಖ್ಯೆ, ನಗರದ ಬಹುತೇಕ ಚಿತಾಗಾರಗಳು ಫುಲ್‌! |Oneindia Kannada
    ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

    ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

    ಬೆಂಗಳೂರಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಅಧಿಕವಾಗಿದ್ದ ತಾಪಮಾನ ಕಳೆದ ವಾರ ಸ್ವಲ್ಪ ತಗ್ಗಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆ, ರಾಮನಗರ, ಕನಕಪುರದಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಫಲವತ್ತಾಗಿ ಬೆಳೆದಿದ್ದ ಬಾಳೆ ತೋಟ ನಾಶವಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+