• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದಲ್ಲೆಡೆ ಮತ್ತೆ ಮಳೆ ಆರ್ಭಟ, ತಾಪಮಾನ ಎಲ್ಲಿ ಎಷ್ಟಿದೆ?

|

ಕರ್ನಾಟಕದ ವಿವಿಧೆಡೆ ಏಪ್ರಿಲ್ 20ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದ ಹಲವೆಡೆ ಕಳೆದ ವಾರ ಪೂರ್ವ ಮುಂಗಾರು ಮಾರುತಗಳ ದೆಸೆಯಿಂದ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದರೂ ಕೆಲವೆಡೆ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 58ಮಿ.ಮೀ ತುಮಕೂರು ಜಿಲ್ಲೆಯ ಪಾವಗಡದ ದೊಮ್ಮತಮರಿಯಲ್ಲಿ ದಾಖಲಾಗಿದೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬಿಬಿಎಂಪಿ ಮಳೆ ಮುನ್ಸೂಚನೆ: ಬೆಂಗಳೂರಿನ ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಎಲ್ಲೆಲ್ಲಿ ಮಳೆ ಸಾಧ್ಯತೆ?

ಎಲ್ಲೆಲ್ಲಿ ಮಳೆ ಸಾಧ್ಯತೆ?

ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಏಪ್ರಿಲ್ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆ. ರಾಜ್ಯದಾದ್ಯಂತ ಅಲ್ಲಲ್ಲಿ ಬಲವಾದ ಮೈಲ್ಮೈಸುಳಿಗಾಳಿ ಬೀಸುತ್ತಿದ್ದು ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಕಲಬುರಗಿಯಲ್ಲಿ 39.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದೆಲ್ಲೆಡೆ ಬಹುತೇಕ ಸರಾಸರಿ 24 ರಿಂದ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ದಕ್ಷಿಣ ಒಳನಾಡಿನ ಕೋಲಾರ, ಬಳ್ಳಾರಿಯಲ್ಲೂ ಈ ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

  ಭಾರಿ ಮಳೆ ಸೂಚನೆ ಕೊಟ್ಟ ಹವಾಮಾನ ಇಲಾಖೆ | Oneindia Kannada
  ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

  ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

  ಬೆಂಗಳೂರಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಅಧಿಕವಾಗಿದ್ದ ತಾಪಮಾನ ಕಳೆದ ವಾರ ಸ್ವಲ್ಪ ತಗ್ಗಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆ, ರಾಮನಗರ, ಕನಕಪುರದಲ್ಲಿ ಕಳೆದ ವಾರ ಮಳೆಯಾಗಿದ್ದು, ಈ ವಾರ ಬಹುತೇಕ ಮೋಡಕವಿದ ವಾತಾವರಣ ಇರಲಿದೆ.

  English summary
  Weather forecast on April 20: Rain expected in more than 20 districts in Karnataka.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  loader
  X