ಮಳೆ ಮುನ್ಸೂಚನೆ: ಯಾವ ಜಿಲ್ಲೆಯಲ್ಲಿ ಎಷ್ಟಿದೆ ತಾಪಮಾನ?

ಕರ್ನಾಟಕದ ವಿವಿಧೆಡೆ ಏಪ್ರಿಲ್ 25ರ ತನಕ ಸಾಧಾರಣ ಮಳೆ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದ ಹಲವೆಡೆ ಕಳೆದ ವಾರ ಪೂರ್ವ ಮುಂಗಾರು ಮಾರುತಗಳ ದೆಸೆಯಿಂದ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದರೂ ಕೆಲವೆಡೆ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 21.5 ಮಿ.ಮೀ ಬೆಂಗಳೂರು ಪಶ್ಚಿಮ ಜಿಲ್ಲೆಯ ನಾಗಪುರದಲ್ಲಿ ದಾಖಲಾಗಿದೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬಿಬಿಎಂಪಿ ಮಳೆ ಮುನ್ಸೂಚನೆ: ಬೆಂಗಳೂರಿನ ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಎಲ್ಲೆಲ್ಲಿ ಮಳೆ ಸಾಧ್ಯತೆ?

ಎಲ್ಲೆಲ್ಲಿ ಮಳೆ ಸಾಧ್ಯತೆ?

ಮಳೆ ಮುನ್ಸೂಚನೆ: ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ಉತ್ತರ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಕಲಬುರಗಿಯಲ್ಲಿ 39.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.4, ರಾಯಚೂರಿನಲ್ಲಿ 39 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಉಡುಪಿಯ ಹೆಬ್ರಿಯಲ್ಲಿ ಏಪ್ರಿಲ್ 20ರಂದು 71 ಮಿ.ಮೀ ಮಳೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

ಬೆಂಗಳೂರಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಅಧಿಕವಾಗಿದ್ದ ತಾಪಮಾನ ಕಳೆದ ವಾರ ಸ್ವಲ್ಪ ತಗ್ಗಿತ್ತು. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಮೈಸೂರು, ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Recommended Video

      ಭಾರಿ ಮಳೆ ಸೂಚನೆ ಕೊಟ್ಟ ಹವಾಮಾನ ಇಲಾಖೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+