ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಳೆ ಮುನ್ಸೂಚನೆ: ನಿರೀಕ್ಷೆಗೂ ಮೀರಿ ರಾಜ್ಯದ ಹಲವೆಡೆ ಮಳೆಗೆ ಏನು ಕಾರಣ?

|
Google Oneindia Kannada News

ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಸತತ ಮಳೆಯಾಗುತ್ತಿದೆ. ಏಪ್ರಿಲ್ 27ರ ತನಕ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ, ಬೆಂಗಳೂರಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿದಿದೆ. ಇನ್ನು ಉತ್ತರ ಒಳನಾಡಿನ ಹಲವೆಡೆ ಒಣಹವೆ ಮುಂದುವರೆದಿದ್ದರೂ ಕೆಲವೆಡೆ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಮಳೆ ಮಾರುತ ತೇವಾಂಶವುಳ್ಳ ಮೋಡಗಳು ಹೆಚ್ಚಾಗಿ ಚಲಿಸುತ್ತಿರುವುದರಿಂದ ನಿರೀಕ್ಷೆಗೂ ಮೀರಿ ರಾಜ್ಯದ ಹಲವೆಡೆಯಾಗುತ್ತಿದೆ. ಇನ್ನೂ ಕನಿಷ್ಠ ಐದು ದಿನ ಮಳೆ ಮುಂದುವರೆಯಲಿದೆ. ಗುಡುಗು ಮಿಂಚು ಸಹಿತ ಮಳೆ ನಿರೀಕ್ಷಿಸಬಹುದು. ಚಿತ್ರದುರ್ಗದಲ್ಲಿ 54 ಮಿ.ಮೀ, ಚಾಮರಾಜನಗರ 36 ಮಿ.ಮೀ, ಹಾವೇರಿ 38 ಮಿ.ಮೀ, ಚಿಕ್ಕಬಳ್ಳಾಪುರ 24 ಮಿ.ಮೀ ಅಲ್ಲದೆ ಬೆಂಗಳೂರಿನ ಉತ್ತರ ಭಾಗದಲ್ಲಿ ಸುರಿದ ಮಳೆ 22 ಮಿ.ಮೀ ನಷ್ಟಿತ್ತು ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ಮಾಡಿದೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬಿಬಿಎಂಪಿ ಮಳೆ ಮುನ್ಸೂಚನೆ: ಬೆಂಗಳೂರಿನ ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮಿಂಚಿನೊಂದಿಗೆ ಗುಡುಗು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಎಲ್ಲೆಲ್ಲಿ ಮಳೆ ಸಾಧ್ಯತೆ?

ಎಲ್ಲೆಲ್ಲಿ ಮಳೆ ಸಾಧ್ಯತೆ?

ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಉತ್ತರ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 39 ಮಿ.ಮೀ ಬೆಂಗಳೂರು ಉತ್ತರ ವಲಯದ ಯಶವಂತಪುರದಲ್ಲಿ ದಾಖಲಾಗಿದೆ. ಏಪ್ರಿಲ್ 21ರಂತೆ ಹಾಸನ ಜಿಲ್ಲೆ ಅರಸೀಕೆರೆಯ ಬಾಗೇಶಪುರದಲ್ಲಿ 87 ಮಿ.ಮೀ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಧರ್ಮಸ್ಥಳ, ಗೇರುಕಟ್ಟೆ, ವೇಣೂರು, ಗುರುವಾಯನಕೆರೆ, ಉಜಿರೆ, ಮಡಂತ್ಯಾರು, ಮದ್ದಡ್ಕ ಪರಿಸರದಲ್ಲಿ ಭಾರೀ ಮಳೆ ಸುರಿದಿದೆ. ಸುಳ್ಯದ ಸುಬ್ರಹ್ಮಣ್ಯ, ಗುತ್ತಿಗಾರು, ಕಲ್ಮಕಾರು, ಗಾಳಿಬೀಡು ಪ್ರದೇಶದಲ್ಲಿ ಭಾರೀ ಮಳೆ ಸುರಿದಿದ್ದು, ವಿದ್ಯುತ್ ಕಂಬಗಳೆಲ್ಲಾ ಮುರಿದು ಬಿದ್ದಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಉತ್ತರ ಒಳನಾಡಿನ ಜಿಲ್ಲೆಗಳಾದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.4, ರಾಯಚೂರಿನಲ್ಲಿ 39 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಅಧಿಕವಾಗಿದ್ದ ತಾಪಮಾನ ಕಳೆದ ವಾರ ಸ್ವಲ್ಪ ತಗ್ಗಿದೆ.

Recommended Video

Lockdown ವಿಚಾರವಾಗಿ ಸ್ಪಷ್ಟನೆ ನೀಡಿದ Dr. Sudhakar | Oneindia Kannada

English summary
Weather forecast on April 22: Heavy to moderate Rain expected in Malnad and coastal districtsin Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X