ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ ತಾಪಮಾನ ಎಷ್ಟಿದೆ?

ಹವಾಮಾನ ಮುನ್ಸೂಚನಾ ಕೇಂದ್ರದ ವರದಿಯಂತೆ ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ ಎಂದು ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ.

Recommended Video

      ಭಾರಿ ಮಳೆ ಸೂಚನೆ ಕೊಟ್ಟ ಹವಾಮಾನ ಇಲಾಖೆ | Oneindia Kannada

      ರಾಜ್ಯದ ಹಲವೆಡೆ ಕಳೆದ ವಾರ ಪೂರ್ವ ಮುಂಗಾರು ಮಾರುತಗಳ ದೆಸೆಯಿಂದ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಯೆಲ್ಲೋ ಅಲರ್ಟ್ ಘೋಷಿಸಿರುವ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಭಾರಿ ಮಳೆ, ಗಾಳಿಯನ್ನು ನಿರೀಕ್ಷಿಸಲಾಗಿದೆ, ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದರೂ ಕೆಲವೆಡೆ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

      ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 51 ಮಿ.ಮೀ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ನೆಲ್ಲಿಕಾರು ಎಂಬಲ್ಲಿ ದಾಖಲಾಗಿದೆ. ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

      ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

      ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

      ಬಿಬಿಎಂಪಿ ಮಳೆ ಮುನ್ಸೂಚನೆ: ಬೆಂಗಳೂರಿನ ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

      ಎಲ್ಲೆಲ್ಲಿ ಮಳೆ ಸಾಧ್ಯತೆ?

      ಎಲ್ಲೆಲ್ಲಿ ಮಳೆ ಸಾಧ್ಯತೆ?

      ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

      ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್. ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರದಲ್ಲಿ ಮಳೆ ಬೀಳಲಿದೆ.

      ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

      ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

      ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

      ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

      ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

      ಬೆಂಗಳೂರಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಏಪ್ರಿಲ್ 30 ರಂದು ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗದಲ್ಲಿ ಮಳೆಯಾಗಲಿದೆ. ಇದಲ್ಲದೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+